ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ ಹೈದರಾಬಾದ್‌ನ ತಾಜ್ ಕೃಷ್ಣ ಹೋಟೆಲ್‌ನಲ್ಲಿ ನಡೆದ ಸಿಎಲ್‌ಪಿ ಸಭೆ 

ಬೆಂಗಳೂರು/ ಹೈದರಾಬಾದ್ [ಮೇ.18]: ಕಾಂಗ್ರೆಸ್ ಶಾಸಕಾಂಗ ಪಕ್ಷದ [ಸಿಎಲ್‌ಪಿ] ನಾಯಕರಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ.

ಹೈದರಾಬಾದ್‌ನ ತಾಜ್ ಕೃಷ್ಣ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಸಿಎಲ್‌ಪಿ ನಾಯಕರಾಗುತ್ತಾರೆ ಎಂದು ಹೇಳಲಾಗುತಿತ್ತು. ಆದರೆ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯರನ್ನೇ ಸಿಎಲ್‌ಪಿ ನಾಯಕರೆಂದು ನಿರ್ಧರಿಸಲಾಗಿದೆ.

ಶನಿವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಆಪರೇಶನ್ ಕಮಲದ ಭೀತಿಯಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಹೈದರಾಬಾದ್‌ಗೆ ತೆರಳಿದ್ದು, ಅಲ್ಲೇ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲಾಗಿದೆ.