ಶಾಸಕಾಂಗ ಪಕ್ಷದ ನಾಯಕರಾಗಿ ಪರಮೇಶ್ವರ್ ಬದಲು ಸಿದ್ದರಾಮಯ್ಯ ಏಕೆ ..?

First Published 19, May 2018, 9:07 AM IST
Siddaramaiah elected CLP leader
Highlights

ವಾಸ್ತವವಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷರನ್ನಾಗಿ ಪರಮೇಶ್ವರ್ ಅವರನ್ನು ನೇಮಕ ಮಾಡುವ ಕುರಿತು  ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದರು. ಆದರೆ, ರಾಜ್ಯಪಾಲರು ಹಂಗಾಮಿ ಸ್ಪೀಕರ್ ಆಗಿ ಕೆ.ಜೆ. ಬೋಪಯ್ಯ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ತನ್ನ ನಿಲುವು ಬದಲಿಸಿದ್ದು ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಕ ಮಾಡಲು ಸೂಚನೆ ನೀಡಿತು.

ಬೆಂಗಳೂರು :  ವಾಸ್ತವವಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷರನ್ನಾಗಿ ಪರಮೇಶ್ವರ್ ಅವರನ್ನು ನೇಮಕ ಮಾಡುವ ಕುರಿತು  ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದರು. ಆದರೆ, ರಾಜ್ಯಪಾಲರು ಹಂಗಾಮಿ ಸ್ಪೀಕರ್ ಆಗಿ ಕೆ.ಜೆ. ಬೋಪಯ್ಯ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ತನ್ನ ನಿಲುವು ಬದಲಿಸಿದ್ದು ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಕ ಮಾಡಲು ಸೂಚನೆ ನೀಡಿತು.

ಬೋಪಯ್ಯ ಅವರು ಬಿಜೆಪಿ ಪರವಾಗಿ ಶನಿವಾರ ವಿಧಾನಸಭೆ ನಡೆಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಭಾವಿಸಿದ್ದು, ಈ ವೇಳೆಗೆ ಪ್ರಬಲವಾಗಿ ವಾದ ಮಂಡಿಸಲು ಸಿದ್ದರಾಮಯ್ಯ ಅವರೇ ಸೂಕ್ತ ಎಂಬ ಕಾರಣಕ್ಕೆ ಖುದ್ದು ರಾಹುಲ್ ಗಾಂಧಿ ಅವರು ಈ ಸೂಚನೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ. 

ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಬದಲಾಗಿ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ.ವಾಸ್ತವವಾಗಿ ಪರಮೇಶ್ವರ್ ಅವರನ್ನು ಸಿಎಲ್‌ಪಿ ನಾಯಕ ಮಾಡಿ ಸಿದ್ದರಾಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿಸುವ ಚಿಂತನೆ ಕಾಂಗ್ರೆಸ್‌ನಲ್ಲಿತ್ತು.

loader