ಸಿದ್ದರಾಮಯ್ಯ ಈಗ ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿ

Siddaramaiah resigns after Congress defeat in Karnataka polls
Highlights

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದ ಹಿನ್ನಲೆಯಲ್ಲಿ ಐದು ವರ್ಷಗಳ ಕಾಲ ಯಶಸ್ವಿಯಾಗಿ ಅಧಿಕಾರ ಪೂರೈಸಿದ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು: ಐದು ವರ್ಷಗಳ ಕಾಲ ಯಶಸ್ವಿಯಾಗಿ ಅಧಿಕಾರ ಪೂರೈಸಿದ ಸಿದ್ದರಾಮಯ್ಯ, ಕಾಂಗ್ರೆಸ್ ಸೋಲನುಭವಿಸಿದ ಹಿನ್ನಲೆಯಲ್ಲಿ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. 

ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಕೊಂದು ತಿರುವು, ಕ್ಷಣಕ್ಕೊಂದು ಮುರಿವು

ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯ ಚಾಮುಂಡೇಶ್ವರಿಯಲ್ಲಿ ಸೋಲುಂಡರೆ, ಬಾಗಲಕೋಟೆಯ ಬದಾಮಿಯಲ್ಲಿ ಕೇವಲ ಒಂದೂವರೆ ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ. ಆ ಮೂಲಕ ಗೆದ್ದರೂ, ಸೋಲು ಒಪ್ಪಿಕೊಳ್ಳಬೇಕಾದ ಸ್ಥಿತಿ ಸಿದ್ದರಾಮಯ್ಯ ಅವರದ್ದು.

ಮಂಡ್ಯದಲ್ಲಿ ಏಳಕ್ಕೆ ಏಳೂ ಸ್ಥಾನಗಳು ಜೆಡಿಎಸ್‌ಗೆ

'ಜನಗಳೊಂದಿಗೆ ಹೆಚ್ಚಾಗಿ ಬೆರೆಯದಿರುವುದು' ಸೋಲಿಗೆ ಕಾರಣವೆಂದು ಸಿದ್ದರಾಮಯ್ಯ, ಜನಾದೇಶಕ್ಕೆ ನೀಡಿದ ಮೊದಲ ಪ್ರತಿಕ್ರಿಯೆ. 

ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಜಮೀರ್ ಹೇಳಿದ್ದೇನು?

ಮತ್ತೊಮ್ಮೆ ಸರಕಾರ ರಚಿಸುವ ಹುಮ್ಮಸ್ಸಿನಲ್ಲಿದ್ದ ಸಿದ್ದರಾಮಯ್ಯ ಅವರಿಗೆ, ಜನರು ನೀಡಿರುವ ಆದೇಶ ಸಹಜವಾಗಿಯೇ ನಿರಾಶೆ ತರಿಸಿದೆ. ಸಿದ್ದರಾಮಯ್ಯ ಸಂಪುಟದ ಬಹುತೇಕ ಸಚಿವರು ಸೋತು ಮನೆಗೆ ಹೋಗಿದ್ದು, ಡಿಕೆಶಿ, ಎಚ್.ಕೆ.ಪಾಟೀಲ್, ಆರ್.ವಿ.ದೇಶಪಾಂಡೆಯವರಂಥ ಕೆಲವರು ಮಾತ್ರ ತಮ್ಮ ವರ್ಚಸ್ಸಿನಿಂದ ಗೆಲವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡಿಮೆ ಸ್ಥಾನಗಳನ್ನು ಪಡೆದುಕೊಂಡಿರುವುದು ಮಾತ್ರವಲ್ಲ, ಸಚಿವ ಸಂಪುಟದ ಸಚಿವರೂ ಸೋತಿದ್ದು ಸಿದ್ದರಾಮಯ್ಯ ಅವರ ಸೋಲಿನ ನೋವನ್ನು ಮತ್ತಷ್ಟು ಹೆಚ್ಚಿಸಿದೆ.

ಸೋತ ತಮ್ಮನಿಗೆ ಅಣ್ಣನ ಬುದ್ಧೀವಾದವೇನು?
 

ಕೋಟಿ ಒಡೆಯ ಪ್ರಿಯಕೃಷ್ಣನಿಗೆ ಒಲಿಯದ ವಿಜಯಲಕ್ಷ್ಮಿ

loader