ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಮುಕ್ತಾಯಕ್ಕೆ ಇನ್ನು ಮೂರು ದಿನ ಬಾಕಿ ಇದ್ದು, ಇಂದು ರಾಜ್ಯದಲ್ಲಿ ಹೈವೋಲ್ಟೇಜ್ ಭಾಷಣಗಳಿಗೆ ವೇದಿಕೆ ಸಜ್ಜಾಗಿದೆ.  

ಬೆಂಗಳೂರು : ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಮುಕ್ತಾಯಕ್ಕೆ ಇನ್ನು ಮೂರು ದಿನ ಬಾಕಿ ಇದ್ದು, ಇಂದು ರಾಜ್ಯದಲ್ಲಿ ಹೈವೋಲ್ಟೇಜ್ ಭಾಷಣಗಳಿಗೆ ವೇದಿಕೆ ಸಜ್ಜಾಗಿದೆ. 

ಒಂದೇ ದಿನ ಪ್ರಧಾನಿ ನರೇಂದ್ರ ಮೋದಿ, ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಘಟಾನುಘಟಿ ನಾಯಕರು ರಾಜ್ಯದ ವಿವಿಧೆಡೆ ಪ್ರಚಾರ ನಡೆಸಲಿದ್ದಾರೆ. 

ಮೋದಿ ಅವರು ವಿಜಯಪುರ, ಕೊಪ್ಪಳ, ಬೆಂಗಳೂರಿನಲ್ಲಿ ಪ್ರಚಾರ ಕೈಗೊಳ್ಳಲಿದ್ದರೆ, ಸೋನಿಯಾ ಗಾಂಧಿ ವಿಜಯಪುರದಲ್ಲಿ ಈ ಚುನಾವಣೆಯ ತಮ್ಮ ಪ್ರಪ್ರಥಮ ರ್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ. 

ಇದೇ ವೇಳೆ, ರಾಹುಲ್ ಅವರು ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ವಿಜಯಪುರದಲ್ಲಿ ಮೋದಿ ಹಾಗೂ ಸೋನಿಯಾ ಮತ್ತು ಬೆಂಗಳೂರಿನಲ್ಲಿ ಮೋದಿ ಮತ್ತು ರಾಹುಲ್ ಒಂದೇ ದಿನ ರ್ಯಾಲಿಗಳಲ್ಲಿ ಭಾಗಿಯಾಗುತ್ತಿರುವುದು ವಿಶೇಷ!