ಶ್ರೀರಾಮುಲು ಬಾದಾಮಿ ನಾಮಪತ್ರ ಇನ್ನೂ ಸಸ್ಪೆನ್ಸ್‌

First Published 24, Apr 2018, 7:40 AM IST
Sri Ramulu Contest From Badami Constituency
Highlights

ಪ್ರತಿಷ್ಠೆಯ ಕಣವಾಗಿ ಮಾರ್ಪಡಲಿರುವ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದ್ದರೂ ಕೊನೆಯ ದಿನವಾದ ಮಂಗಳವಾರದವರೆಗೆ ಗುಟ್ಟು ಬಿಟ್ಟುಕೊಡದಿರಲು ತೀರ್ಮಾನಿಸಲಾಗಿದೆ.

ಬೆಂಗಳೂರು (ಏ. 24):  ಪ್ರತಿಷ್ಠೆಯ ಕಣವಾಗಿ ಮಾರ್ಪಡಲಿರುವ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದ್ದರೂ ಕೊನೆಯ ದಿನವಾದ ಮಂಗಳವಾರದವರೆಗೆ ಗುಟ್ಟು ಬಿಟ್ಟುಕೊಡದಿರಲು ತೀರ್ಮಾನಿಸಲಾಗಿದೆ.

ಸೋಮವಾರ ಪಕ್ಷದ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಬಿಡುಗಡೆಯಾಗಿದ್ದು, ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಖೈರುಗೊಳಿಸಲಾಗಿದೆ. ಆದರೆ, ಬಾದಾಮಿ ಸೇರಿದಂತೆ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸದೇ ಇರುವುದು ಕುತೂಹಲ ಮೂಡಿಸಿದೆ.
 

loader