ಬೆಂಗಳೂರು [ಮೇ 17]: ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ  ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಬಹುಮತ ಸಾಬೀತುಪಡಿಸಲು ಬಿಜೆಪಿಗೆ 15 ದಿನಗಳ ಕಾಲ  ಸಮಯಾವಕಾಶವನ್ನು ನೀಡಲಾಗಿದೆ. 

ಈ ಸಮಯದಲ್ಲಿ ಬಿಜೆಪಿ ತನ್ನ ಬಹುಮತವನ್ನು ಸಾಬೀತುಪಡಿಸುವ ಮೂಲಕ ಸರ್ಕಾರ ಉಳಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸತತ ಪ್ರಯತ್ನಗಳು ಕೂಡ ನಡೆಯುತ್ತಿವೆ. 

ಈ ಬಗ್ಗೆ ಬಿಜೆಪಿ ಮುಖಂಡ ಶ್ರೀ ರಾಮುಲು ಅವರು ಹೆಚ್ಚಿನ ಭರವಸೆಯನ್ನು ಹೊಂದಿದ್ದು ನಮಗೆ ಪಕ್ಷೇತರರ ಬೆಂಬಲವಿದೆ ಎಂದು ಹೇಳಿದ್ದಾರೆ. ಅಲ್ಲದೇ ಯಾರೂ ಊಹಿಸಲಾರದ ಸಂಖ್ಯೆಯಲ್ಲಿ ಶಾಸಕರು ಬಿಜೆಪಿಯೊಂದಿಗೆ ಬರುತ್ತಾರೆ ಎಂದು ಹೇಳಿದ್ದಾರೆ. 

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಅತೃಪ್ತರು ಇದ್ದಾರೆ.  ಅತೃಪ್ತ ಶಾಸಕರೆಲ್ಲರೂ ಕೂಡ ನಮ್ಮ ಜೊತೆಗೆ ಬರುತ್ತಾರೆ ಎಂದು ಶ್ರೀ ರಾಮುಲು ವಿಶ್ವಾಸದಿಂದ ಹೇಳಿದ್ದಾರೆ. 

ರಾಜ್ಯದಲ್ಲಿ ಒಂದೆಡೆ ಆಪರೇಷನ್ ಕಮಲದ ಯತ್ನಗಳು ನಡೆಯುತ್ತಿದ್ದರೆ, ಇನ್ನೊಂದೆಡೆ ಬಿಜೆಪಿ ಶಾಸಕರಿಗೂ ಕೂಡ ಜೆಡಿಎಸ್ ಹಾಗೂ ಕಾಂಗ್ರೆಸ್ ಸೇರಿ ಗಾಳ ಹಾಕುತ್ತಿವೆ ಎನ್ನಲಾಗಿದೆ.  ಈ ನಿಟ್ಟಿನಲ್ಲಿ ಕರ್ನಾಟಕ  ರಾಜಕೀಯದಲ್ಲಿ ಹೈ ಡ್ರಾಮ ನಡೆಯುತ್ತಿದೆ.