ನೆಚ್ಚಿನ ಅಭ್ಯರ್ಥಿಗಳ ಪರ ಪ್ರಚಾರಕ್ಕಿಳಿದ ತಾರೆಗಳು

Stars Election Campaign
Highlights

 ವಿಧಾನಸಭಾ ಚುನಾವಣೆ ಪ್ರಚಾರ ಕಾರ್ಯ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿರುವಂತೆಯೇ ಚಲನಚಿತ್ರ ಕಲಾವಿದರೂ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ನೆಚ್ಚಿನ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿದ್ದಾರೆ. 

ಬೆಂಗಳೂರು: ವಿಧಾನಸಭಾ ಚುನಾವಣೆ ಪ್ರಚಾರ ಕಾರ್ಯ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿರುವಂತೆಯೇ ಚಲನಚಿತ್ರ ಕಲಾವಿದರೂ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ನೆಚ್ಚಿನ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿದ್ದಾರೆ. 
ಶ್ರುತಿ, ಯಶ್, ಪ್ರಥಮ್, ನಿರ್ದೇಶಕ ಚಂದ್ರು, ರೂಪಿಣಿ, ಮಯೂರಿ ಬುಧವಾರ ವಿವಿಧೆಡೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡರು.
ತುಮಕೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜ್ಯೋತಿ ಗಣೇಶ್ ಅವರ ಪರ ಚಲನಚಿತ್ರ ನಟಿ ಹಾಗೂ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರುತಿ ಅವರು ಕ್ಯಾತ್ಸಂದ್ರದಲ್ಲಿ ರೋಡ್ ಶೋ ನಡೆಸಿದರು. ಚಿತ್ರನಟ ಯಶ್ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ಹಾಗೂ ಬಿಜೆಪಿ ಎರಡು ಪಕ್ಷಗಳ ಪರ ಪ್ರಚಾರ ನಡೆಸಿದ್ದು ವಿಶೇಷವಾಗಿತ್ತು.

ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಮ್‌ದಾಸ್ ಪರ, ಕೆ.ಆರ್.ನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸಾ.ರಾ.ಮಹೇಶ್  ಪರವಾಗಿ ಮತ ಯಾಚಿಸಿದರು. ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಎಚ್.ಎಂ.ರೇವಣ್ಣ ಅವರ ಪರ ಬಿಗ್‌ಬಾಸ್ ಖ್ಯಾತಿಯ ಪ್ರಥಮ್, ನಿರ್ದೇಶಕ ಆರ್.ಚಂದ್ರು, ನಟಿಯರಾದ ರೂಪಿಣಿ, ಮಯೂರಿ ಮತ್ತಿತರರು ಬುಧವಾರ ಚನ್ನಪಟ್ಟಣದಲ್ಲಿ ಪ್ರಚಾರ ನಡೆಸಿದರು. ಈ ವೇಳೆ ಎಚ್.ಎಂ.ರೇವಣ್ಣ ಅವರ ಪತ್ನಿ ವತ್ಸಲಾ ರೇವಣ್ಣ, ಪುತ್ರ ಹಾಗೂ ಚಿತ್ರನಟ ಅನೂಪ್ ರೇವಣ್ಣ ಇದ್ದರು.

loader