ಬಾದಾಮಿಯಲ್ಲಿ ರಾಮುಲುಗೆ ಸಿಎಂ ಮಾಸ್ಟರ್ ಸ್ಟ್ರೋಕ್

ಬೆಂಗಳೂರು(ಏ.03): ಬಾದಾಮಿಯಲ್ಲಿ ೨ನೇ ಕ್ಷೇತ್ರವಾಗಿ ಆಯ್ಕೆ ಮಾಡಿಕೊಂಡು ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರಿಗೆ ಮಾಸ್ಟರ್ ಸ್ಟ್ರೋಕ್ ನೀಡಲು ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ.
ಸ್ಯಾಂಡಲ್'ವುಡ್ ಸ್ಟಾರ್ ಕಿಚ್ಚ ಸುದೀಪ್  ಅವರು ಸಿಎಂ ಸಿದ್ದರಾಮಯ್ಯ ಪರ ಬಾದಾಮಿಯಲ್ಲಿ ಪ್ರಚಾರ ಮಾಡಲಿದ್ದಾರೆ. ಸುವರ್ಣ ನ್ಯೂಸ್ - ಕನ್ನಡಪ್ರಭಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ' ಬಾಗಲಕೋಟೆ ಜಿಲ್ಲೆ ಬಾದಾಮಿ ಕ್ಷೇತ್ರದಲ್ಲಿ ಮೇ.9ರಂದು ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ.ಅದೇ ರೀತಿ ಚಾಮುಂಡೇಶ್ವರಿಯಲ್ಲಿ ಸಿಎಂ ಪರ ಕಿಚ್ಚ ಕಮಾಲ್ ಮಾಡುವ ಸಾಧ್ಯತೆಯಿದೆ. 
ಬಿಜೆಪಿ ಪರವೂ ಬ್ಯಾಟಿಂಗ್
ಯಾದಗಿರಿ ಜಿಲ್ಲೆ ಸುರಪುರ ಕ್ಷೇತ್ರದ ಬಿಜೆಪಿ ಶಾಸಕ ರಾಜುಗೌಡ ಸುದೀಪ್ ಅವರಿಗೆ ಆಪ್ತ ಸ್ನೇಹಿತರಾಗಿದ್ದು ಅವರ ಪರವು ಪ್ರಚಾರ ಕೈಗೊಳ್ಳಲಿದ್ದಾರೆ. ರಾಜುಗೌಡ ನನ್ನ ತಮ್ಮನಿದ್ದಂತೆ. ಆತನ ಪರವು ಪ್ರಚಾರ ನಡೆಸುವುದಾಗಿ ತಿಳಿಸಿದ ಅವರು, ನಾನು ಕಲಾವಿದ, ನನಗೆ ಯಾವುದೇ ಪಕ್ಷದ ಹಂಗು, ಮುಲಾಜು ಇಲ್ಲ'ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

Comments 0
Add Comment