ಜಯನಗರ: ತೇಜಸ್ವಿ ಸೂರ್ಯಗೆ ಟಿಕೆಟ್ ಕೊಡುತ್ತಾ ಬಿಜೆಪಿ?

First Published 17, May 2018, 6:10 PM IST
Tejaswi Surya may get BJP ticket to contest from Jayanagara Assembly Constituency
Highlights

ಬಿಜೆಪಿ ಅಭ್ಯರ್ಥಿ ಬಿ.ಎನ್.ವಿಜಯ್‌ಕುಮಾರ್ ನಿಧನದಿಂದ ಬೆಂಗಳೂರಿನ ಜಯನಗರ ವಿಧಾನಸಭಾ ಚುನಾವಣೆ ಮುಂದೂಡಲ್ಪಟ್ಟಿತ್ತು. ಇಲ್ಲಿಗೆ ಜೂನ್ 13ರಂದು ಚುನಾವಣೆ ನಡೆಯಲಿದೆ. ಬಿಜೆಪಿಗೆ ಮಾತ್ರ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಅವಕಾಶವಿರುತ್ತದೆ. ಬಿಜೆಪಿಯಿಂದ ಯಾರಾಗುತ್ತಾರೆ ಅಭ್ಯರ್ಥಿ?

ಬೆಂಗಳೂರು: ಬಿಜೆಪಿ ಅಭ್ಯರ್ಥಿ ನಿಧನದಿಂದ ಸ್ಥಗಿತವಾಗಿರುವ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಜೂನ್ 11ರಂದು ಚುನಾವಣೆ ನಡೆಯಲಿದ್ದು, ಮೇ 17ರಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.

ಬಿಜೆಪಿ ಅಭ್ಯರ್ಥಿ ಬಿ.ಎನ್. ವಿಜಯ್‌ಕುಮಾರ್ ನಿಧನದಿಂದ ಚುನಾವಣೆ ಮುಂದೂಡಲ್ಪಟ್ಟಿದ್ದು, ಬಿಜೆಪಿ ಅಭ್ಯರ್ಥಿಗೆ ಮಾತ್ರ ನಾಮಪತ್ರ ಸಲ್ಲಿಸಲು ಅವಕಾಶವಿರುತ್ತದೆ. ಫೈರ್ ಬ್ರ್ಯಾಂಡ್ ಎಂದೇ ಖ್ಯಾತರಾದ, ರಾಜ್ಯ, ರಾಷ್ಟ್ರೀಯ ಚಾನಲ್‌ಗಳ ಚರ್ಚೆಯಲ್ಲಿ ಭಾಗವಹಿಸಿ ಅಪಾರ ಮೆಚ್ಚುಗೆ ಗಳಿಸಿದ ಯುವ ನೇತಾರ ತೇಜಸ್ವಿ ಸೂರ್ಯ ಅವರನ್ನುಪಕ್ಷ ಕಣಕ್ಕಿಳಿಸಬಹುದು, ಎನ್ನಲಾಗುತ್ತಿದೆ.

ಜಯನಗರದಲ್ಲಿ ಕಾಂಗ್ರೆಸ್‌ನಿಂದ ರಾಮಲಿಂಗ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ, ಜೆಡಿಎಸ್‌ನಿಂದ ಕಾಳೇಗೌಡರು ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ರವಿಕೃಷ್ಣ ರೆಡ್ಡಿ ಕಣದಲ್ಲಿದ್ದಾರೆ.

ಮೇ 15ರಂದು ಹೊರಬಿದ್ದ ಫಲಿತಾಂಶದಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಬಂದಿಲ್ಲ. ಏಕೈಕ ಅತಿ ದೊಡ್ಡ ಪಕ್ಷ ಬಿಜೆಪಿಗೆ ರಾಜ್ಯಪಾಲರು ಸರಕಾರ ರಚಿಸಲು ಆಹ್ವಾನಿಸಿದ್ದು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ಅಕ್ರಮ ಮತಚೀಟಿ ಪತ್ತೆ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟ ಆರ್‌ಆರ್ ನಗರ ಚುನಾವಣೆ ಮೇ 28ರಂದು ನಡೆಯಲಿದೆ. ಹಾಗೂ ಈ ಜಯನಗರ ಚುನಾವಣೆಗಳು ಬಲ ಹೆಚ್ಚಿಸಿಕೊಳ್ಳಲು ಬಿಜೆಪಿ ಪಾಲಿಗೆ ಮಹತ್ವದ್ದಾಗಿವೆ.
 
ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಜೂನ್ 11ರಂದು ಚುನಾವಣೆ ನಡೆಯಲಿದೆ.  ಮೇ.18 ನಾಮಪತ್ರ ಪ್ರಕ್ರಿಯೆ ಶುರುವಾಗಲಿದ್ದು, ಮೇ.25 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಜೂನ್ 13ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 

ಬಹುಮತ ಸಾಬೀತು ಪಡಿಸಲು ಬಿಜೆಪಿ ಪ್ಲ್ಯಾನ್ ಏನು?


 

loader