ನಾಳೆ ವಿಧಾನಸೌಧದಲ್ಲಿ ಬಹುಮತ ಸಾಬೀತುಪಡಿಸುವ ಹಿನ್ನೆಲೆಯಲ್ಲಿ   ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮೇಲೆ  ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹದ್ದಿನ ಕಣ್ಣಿಟ್ಟಿದ್ದಾರೆ. 

ಬೆಂಗಳೂರು (ಮೇ. 18): ನಾಳೆ ವಿಧಾನಸೌಧದಲ್ಲಿ ಬಹುಮತ ಸಾಬೀತುಪಡಿಸುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮೇಲೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹದ್ದಿನ ಕಣ್ಣಿಟ್ಟಿದ್ದಾರೆ. 

ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್ ರಾಜು ಎಲ್ಲಾ ಜಿಲ್ಲೆಗಳ ಎಸ್ ಪಿ ಮತ್ತು ವಲಯ ಐಜಿಪಿಗಳ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಿ ಚರ್ಚೆ ನಡೆಸಿದ್ದಾರೆ. ನಾಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಎಲ್ಲಾ ಕಡೆ ಬಂದೋಬಸ್ತ್ ಕೈಗೊಳ್ಳುವಂತೆ ಡಿಜಿಪಿ ನೀಲಮಣಿ ಎನ್ ರಾಜು ಸೂಚನೆ ನೀಡಿದ್ದಾರೆ. 

ನಾಳೆ ಬಹಮತ ಸಾಬೀತುಪಡಿಸುವಂತೆ ಸುಪ್ರೀಂಕೋರ್ಟ್ ಬಿಎಸ್ ವೈ ನೇತೃತ್ವದ ಸರ್ಕಾರಕ್ಕೆ ಹೇಳಿದೆ. ಬಹುಮತ ಸಾಬೀತುಪಡಿಸಲು ಬಿಜೆಪಿಗೆ ಕೇವಲ 8 ಶಾಸಕರ ಕೊರತೆಯಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರನ್ನು ಎಲ್ಲಿ ಕುದುರೆ ವ್ಯಾಪಾರ ಮಾಡಿ ಬಿಡುತ್ತಾರೋ ಎಂದು ಹೈದರಾಬಾದ್ ರೆಸಾರ್ಟ್’ಗೆ ಕಳುಹಿಸಲಾಗಿದೆ ಹಾಗಾಗಿ ಬಿಜೆಪಿ ಇಕ್ಕಟ್ಟಿಗೆ ಸಿಲುಕಿದೆ.