ಪ್ರವಾಸ ಮೊಟಕುಗೊಳಿಸಿ ತೆರಳಿದ ಯೋಗಿ

UP CM Yogi Adityanath cuts short Karnataka campaign
Highlights

ಉತ್ತರಪ್ರದೇಶ ಹಾಗೂ ರಾಜಸ್ಥಾನದಲ್ಲಿ ಭೀಕರ ಧೂಳಿನ ಬಿರುಗಾಳಿ, ಮಳೆಗೆ ನೂರಾರು ಮಂದಿ ಬಲಿಯಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಕರ್ನಾಟರ ಪ್ರವಾಸವನ್ನು ಮೊಟಕುಗೊಳಿಸಿ ಶುಕ್ರವಾರ ಸಂಜೆ ಉತ್ತರಪ್ರದೇಶಕ್ಕೆ ತೆರಳಿದ್ದಾರೆ. 

ಬೆಂಗಳೂರು :  ಉತ್ತರಪ್ರದೇಶ ಹಾಗೂ ರಾಜಸ್ಥಾನದಲ್ಲಿ ಭೀಕರ ಧೂಳಿನ ಬಿರುಗಾಳಿ, ಮಳೆಗೆ ನೂರಾರು ಮಂದಿ ಬಲಿಯಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಕರ್ನಾಟರ ಪ್ರವಾಸವನ್ನು ಮೊಟಕುಗೊಳಿಸಿ ಶುಕ್ರವಾರ ಸಂಜೆ ಉತ್ತರಪ್ರದೇಶಕ್ಕೆ ತೆರಳಿದ್ದಾರೆ. 

ಶುಕ್ರವಾರ ದಾವಣಗೆರೆ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ಬಾಗಲಕೋಟೆಯ ಮುಧೋಳ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆಸಿದ ಪ್ರಚಾರ ವೇಳೆ ಯೋಗಿ ಆದಿತ್ಯನಾಥ್ ಅವರು, ರಾಜ್ಯದಲ್ಲಿರೋದು ಅಭಿವೃದ್ಧಿ ವಿರೋಧಿ, ಯುವಜನ ವಿರೋಧಿ ಹಾಗೂ ರೈತ ವಿರೋಧಿ ಸರ್ಕಾರ ಎಂದು ಕಿಡಿಕಾರಿದರು. 

ರಾಜ್ಯದಲ್ಲಿ ನಾಲ್ಕು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ರೈತರ, ಬಡವರ ಹಣವನ್ನು ಲೂಟಿ ಮಾಡಿದೆ. ಉದ್ಯೋಗ ಸೃಷ್ಟಿ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಕರ್ನಾಟಕ ರಾಜ್ಯದಲ್ಲಿ ಸಮರ್ಪಕವಾಗಿ ಜನತೆಗೆ ತಲುಪಿಸಿಲ್ಲ. ಕೇವಲ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು.

loader