ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದಾರೆ ಉಪೇಂದ್ರ

Upendra Establish New Party
Highlights

ಉಪೇಂದ್ರ ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣೆ ಆಯೋಗಕ್ಕೆ ಭೇಟಿ ನೀಡಿದ್ದಾರೆ. ಟ್ವಿಟರ್​ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. 

ಬೆಂಗಳೂರು (ಏ. 25): ಉಪೇಂದ್ರ ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣೆ ಆಯೋಗಕ್ಕೆ ಭೇಟಿ ನೀಡಿದ್ದಾರೆ. ಟ್ವಿಟರ್​ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಉತ್ತಮ ಪ್ರಜಾಕೀಯ ಎಂಬ ಹೊಸ ಪಕ್ಷ ಹುಟ್ಟುಹಾಕುತ್ತಿದ್ದು ಅದರ ನೊಂದಣಿ ಕಾರ್ಯ ನಡೆಯುತ್ತಿದೆ ಎಂದು ಬರೆದುಕೊಂಡಿದ್ದಾರೆ. ಈ ಹಿಂದೆ ಕೆಪಿಜೆಪಿ ಪಕ್ಷವನ್ನು ಹುಟ್ಟು ಹಾಕಿದ್ದರು. ಆದರೆ ಪಕ್ಷದಲ್ಲಿ ಕೆಲವು ಆಂತರಿಕ ಸಮಸ್ಯೆ ಹಿನ್ನೆಲೆಯಲ್ಲಿ ಪಕ್ಷದಿಂದ ದೂರ ಸರಿದಿದ್ದರು.ಕೆಪಿಜೆಪಿಯಲ್ಲಿ ಕೆಲವು ಮುಖಂಡರ ಜೊತೆ ಭಿನ್ನಾಭಿಪ್ರಾಯವಿತ್ತು. ಅಲ್ಲಿಯೇ ಇದ್ದರೆ ಪಕ್ಷ ಹೋಳಾಗಿ ಹೋಗುತ್ತಿತ್ತು. ಅದು ನನಗೆ ಇಷ್ಟವಿರಲಿಲ್ಲ. ಅಲ್ಲಿಂದ ಹೊರಬಂದು ಹೊಸ ಪಕ್ಷ ಕಟ್ಟಲು ತೀರ್ಮಾನಿಸಿದ್ದೇನೆ ಎಂದು ಈ ಹಿಂದೆ ಹೇಳಿದ್ದರು. ಅದರಂತೆ ಇದೀಗ ಟ್ವೀಟರ್​ನಲ್ಲಿ ಉತ್ತಮ ಪ್ರಜಾಕೀಯ ಪಕ್ಷ ಸ್ಥಾಪನೆ ಮಾಡ್ತಿರೋದಾಗಿ ಸ್ಪಷ್ಟಪಡಿಸಿದ್ದಾರೆ. 

 

 

loader