ಈಶಾನ್ಯ ಪದವೀಧರ ಕ್ಷೇತ್ರದಿಂದ ವಾಟಾಳ್ ನಾಮಪತ್ರ ಸಲ್ಲಿಕೆ

First Published 23, May 2018, 11:28 AM IST
Vatal Nagaraj files nomination papers for the elections to North East Graduate Constituency
Highlights

ಈಶಾನ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಂಗಳವಾರ ನಾಮಪತ್ರ ಸಲ್ಲಿಸಿದರು. 
 

ಕಲಬುರಗಿ: ಈಶಾನ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಂಗಳವಾರ ನಾಮಪತ್ರ ಸಲ್ಲಿಸಿದರು. 

ನಾಮಪತ್ರ ಸಲ್ಲಿಕೆಗೆ ಮಂಗಳವಾರ (ಮೇ 22) ಕೊನೆ ದಿನವಾಗಿದ್ದು, ವಾಟಾಳ್ ಸೇರಿದಂತೆ ಇದುವರೆಗೂ ಒಟ್ಟು 7 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕ್ಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಂತಹ ಎಲ್ಲಾ ಪಕ್ಷಗಳು ಹೈ.ಕ. ಪ್ರದೇಶವನ್ನು ಕಡೆಗಣಿಸಿವೆ. 

ಹಾಗಾಗಿ ಈ ಭಾಗದ ಸಮಸ್ಯೆಯನ್ನು ವಿಧಾನಸೌಧ ಮತ್ತು ವಿಧಾನ ಪರಿಷತ್ತಿನಲ್ಲಿ ಚರ್ಚಿಸುವುದಕ್ಕಾಗಿಯೇ ನಾನು ನಾಮಪತ್ರ ಸಲ್ಲಿಸುತ್ತಿದ್ದೇನೆ. ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರಕ್ಕೆ ಹೋಲಿಸಿದರೆ ಹೈದ್ರಾಬಾದ್ ಕರ್ನಾಟಕದಲ್ಲಿ ಹೋರಾಟದ ಮನೋಭಾವ ಕಡಿಮೆಯಿದೆ. ಆಡಳಿತ ಪಕ್ಷಗಳು ಈ ಭಾಗವನ್ನು ಕಡೆಗಣಿಸಿವೆ ಎಂದು ದೂರಿದರು.

loader