ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ತವರು ಜಿಲ್ಲೆಯ ಪಕ್ಕದಲ್ಲೇ ನಿಂತು ಕಾಂಗ್ರೆಸ್‌ನ ಕುಟುಂಬ ರಾಜಕಾರಣವನ್ನು ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಮೂಲಕ ಮೈಸೂರು ಜಿಲ್ಲೆಯ ವರುಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರರಿಗೆ ಟಿಕೆಟ್ ಕೈತಪ್ಪಿದ್ದು ಯಾಕೆ ಎನ್ನುವ ಸಂದೇಶವನ್ನು ಕ್ಷೇತ್ರದ ಕಾರ್ಯಕರ್ತರಿಗೆ ರವಾನಿಸಿದ್ದಾರೆ. 

ಚಾಮರಾಜನಗರ: ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ತವರು ಜಿಲ್ಲೆಯ ಪಕ್ಕದಲ್ಲೇ ನಿಂತು ಕಾಂಗ್ರೆಸ್‌ನ ಕುಟುಂಬ ರಾಜಕಾರಣವನ್ನು ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಮೂಲಕ ಮೈಸೂರು ಜಿಲ್ಲೆಯ ವರುಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರರಿಗೆ ಟಿಕೆಟ್ ಕೈತಪ್ಪಿದ್ದು ಯಾಕೆ ಎನ್ನುವ ಸಂದೇಶವನ್ನು ಕ್ಷೇತ್ರದ ಕಾರ್ಯಕರ್ತರಿಗೆ ರವಾನಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred


ಚಾಮರಾಜನಗರ ಜಿಲ್ಲೆಯ ಸಂತೆಮರಹಳ್ಳಿಯಲ್ಲಿ ಆಯೋಜಿಸಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಮೋದಿ, ಸಿದ್ದರಾಮಯ್ಯ ಅವರು ರಾಜ್ಯದಲ್ಲಿ 2+1 ಎಂಬ ಹೊಸ ರಾಜಕೀಯ ಸೂತ್ರವನ್ನು ಪರಿಚಯಿಸಿದ್ದಾರೆ. ಸೋಲುವ ಭೀತಿಯಿಂದ ಇನ್ನೊಂದು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಅವರು, ತಾವು ಈ ಹಿಂದೆ ಪ್ರತಿನಿಧಿಸುತ್ತಿದ್ದ ಕ್ಷೇತ್ರವನ್ನು ತಮ್ಮ ಪುತ್ರನಿಗೆ ಬಿಟ್ಟುಕೊಟ್ಟಿದ್ದಾರೆ. ಮೂರರಲ್ಲಿ ಒಂದು ಗೆದ್ದರೂ ಸಾಕು, ಕುಟುಂಬ ರಾಜಕಾರಣದ ಚಕ್ರ ನಡೆಯುತ್ತದೆ ಎಂಬ ಭಾವನೆ ಅವರದು ಎಂದು ಮೋದಿ ವ್ಯಂಗ್ಯವಾಡಿದ್ದಾರೆ.

ಜತೆಗೆ, ತಮ್ಮ ಮಕ್ಕಳಿಗೆ ಟಿಕೆಟ್ ಕೊಡಿಸಿರುವ ರಾಜ್ಯದ ಸಚಿವರದು 1+1 ಎಂಬ ಸೂತ್ರ ಎಂದು ಮೋದಿ ವ್ಯಂಗ್ಯವಾಡಿದ್ದಾರೆ. ಈ ಸೂತ್ರದಿಂದಾಗಿ ಕಾಂಗ್ರೆಸ್ ಕಾರ್ಯಕರ್ತರಿಗೆ ಎಷ್ಟು ನೋವಾಗಿದೆ ಎನ್ನುವುದು ನನಗೆ ಅರ್ಥವಾಗುತ್ತದೆ ಎಂದು ಕಾಲೆಳೆದಿದ್ದಾರೆ. ವರುಣದಲ್ಲಿ ವಿಜಯೇಂದ್ರಗೆ ಕೊನೇ ಕ್ಷಣ ಟಿಕೆಟ್ ಕೈತಪ್ಪಿತ್ತು.