Asianet Suvarna News Asianet Suvarna News

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರು?

8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿದ್ದ ಜಿ ಪರಮೇಶ್ವರ್ ಬದಲಾವಣೆಗೆ ಎಐಸಿಸಿ ಮುಂದಾಗಿದೆ. ಡಿಸಿಎಂ ಸ್ಥಾನ ಸಿಕ್ಕ ಬೆನ್ನಲ್ಲಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ಪರಮೇಶ್ವರ್ ಮುಂದಾಗಿದ್ದಾರೆ.  

Who become president of KPCC

ಬೆಂಗಳೂರು (ಮೇ. 24): 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿದ್ದ ಜಿ ಪರಮೇಶ್ವರ್ ಬದಲಾವಣೆಗೆ ಎಐಸಿಸಿ ಮುಂದಾಗಿದೆ. ಡಿಸಿಎಂ ಸ್ಥಾನ ಸಿಕ್ಕ ಬೆನ್ನಲ್ಲಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ಪರಮೇಶ್ವರ್ ಮುಂದಾಗಿದ್ದಾರೆ. 

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ ಶಿವಕುಮಾರ್,  ಕೆ.ಎಚ್ ಮುನಿಯಪ್ಪ, ಎಚ್ ಕೆ ಪಾಟೀಲ್, ಎಂ.ಬಿ ಪಾಟೀಲ್, ಎಸ್ ಆರ್ ಪಾಟೀಲ್ ಹೆಸರು ಕೇಳಿಬರುತ್ತಿದೆ.  ಲಿಂಗಾಯತರಿಗೆ ಡಿಸಿಎಂ ಸ್ಥಾನ ತಪ್ಪಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಲಿಂಗಾಯತರಿಗೆ ನೀಡುವ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಿದೆ.  

ಲಿಂಗಾಯತರ ಮತಗಳನ್ನ ಕಾಂಗ್ರೆಸ್ ನತ್ತ ಸೆಳೆಯಲು, ಪಕ್ಷ ಸಂಘಟನೆ ಮಾಡುವಂತ ನಾಯಕನಿಗೆ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದೆ.  ಎಸ್ ಆರ್ ಪಾಟೀಲ್, ಎಂ.ಬಿ ಪಾಟೀಲ್ ಪರ ಸಿದ್ದರಾಮಯ್ಯ ಲಾಬಿ ನಡೆಸಿದ್ದಾರೆ.  ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ಡಿಕೆಶಿ ಹೆಸರು ಮೊದಲು ಕೇಳಿ ಬರುತ್ತಿದೆ.  ಸಚಿವ ಸ್ಥಾನ ಕೊಟ್ಟು ಅಧ್ಯಕ್ಷ ಸ್ಥಾನ ಕೊಡಿ ಅಂತಿದ್ದಾರೆ ಡಿ.ಕೆ ಶಿವಕುಮಾರ್.

ಈ ಹಿಂದೆ ಪರಮೇಶ್ವರ್ ಗೃಹ ಸಚಿವರಾಗಿದ್ರೂ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆದಿದ್ದರು.  ನನಗೂ ಇಂಧನ ಖಾತೆ ನೀಡಿ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ. ಇಲ್ಲವಾದರೆ ಈಗಲೇ ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬೇಡ ಎಂದಿದ್ದಾರೆ. 

Follow Us:
Download App:
  • android
  • ios