ರಾಜರಾಜೇಶ್ವರಿ ನಗರ ಚುನಾವಣೆ ಮುಂದೂಡುವಂತೆ ಚುನಾವಣಾ ಆಯೋಗವನ್ನು ಬಿಜೆಪಿ ಆಗ್ರಹಿಸಿದೆ.  ಬುಧವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ ಜಾವ್ಡೇಕರ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು,ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮುಕ್ತ ಮತ್ತು ಪಾರದರ್ಶಕ ಚುನಾವಣೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರಾಜರಾಜೇಶ್ವರಿ ನಗರ ಚುನಾವಣೆ ಮುಂದೂಡುವಂತೆ ಚುನಾವಣಾ ಆಯೋಗವನ್ನು ಬಿಜೆಪಿ ಆಗ್ರಹಿಸಿದೆ. ಬುಧವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ ಜಾವ್ಡೇಕರ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು, ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮುಕ್ತ ಮತ್ತು ಪಾರದರ್ಶಕ ಚುನಾವಣೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಮತದಾರರ ಗುರುತಿನ ಸಂಗ್ರಹಿಸಿಡಲಾಗಿದ್ದ ಅಪಾರ್ಟ್‌ಮೆಂಟ್ ಮಂಜುಳಾ ನಂಜಾಮರಿ ಎಂಬುವರಿಗೆ ಸೇರಿದ್ದಾಗಿದೆ. ತಕ್ಷಣವೇ ಬಂಧಿಸಿ, ಮಂಜುಳಾ ಅವರ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿಸಿದರೆ ಅಕ್ರಮದ ಸತ್ಯ ಹೊರಬರಲಿದೆ ಎಂದು ಪ್ರಕಾಶ್ ಜಾವಡೇಕರ್ ಹೇಳಿದರು. 

ಮುನಿರತ್ನ ಕಿಂಗ್‌ಪಿನ್-ಡಿವಿಎಸ್: ರಾಜರಾಜೇಶ್ವರಿ ನಗರದ ಕ್ಷೇತ್ರದ ಹಾಲಿ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಹುರಿಯಾಳು ಮುನಿರತ್ನ ಅವರೇ ಜಾಲಹಳ್ಳಿಯ ಅಪಾರ್ಟ್ ಮೆಂಟ್‌ನಲ್ಲಿ ಮತದಾರರ ಗುರುತಿನ ಚೀಟಿ ಜಾಲದ ಕಿಂಗ್‌ಪಿನ್ ಆಗಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಆಪಾದಿಸಿದ್ದಾರೆ.