ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಇನ್ನೇನು ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ವಿವಿಧ ಪಕ್ಷಗಳಿಂದ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ.
ಮಡಿಕೇರಿ : ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಇನ್ನೇನು ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ವಿವಿಧ ಪಕ್ಷಗಳಿಂದ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ.
ಇದೀಗ ಮಡಿಕೇರಿಯಲ್ಲಿ ಕೃಷಿಕರೋರ್ವರು ಚುನಾವಣಾ ಕಣಕ್ಕೆ ಧುಮುಕಿದ್ದಾರೆ. 64 ವರ್ಷದ ಪಿ.ಎಸ್ ಯಡೂರಪ್ಪ ಎಂಬ ಕೃಷಿಕ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಮಡಿಕೇರಿ ಚುನಾವಣಾಧಿಕಾರಿ ರಮೇಶ್ ಪಿ. ಕೋನರೆಡ್ಡಿ ಯಡೂರಪ್ಪ ಅವರ ನಾಮಪತ್ರ ಸ್ವೀಕಾರ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಯಡೂರಪ್ಪ ಮಡಿಕೇರಿ ಕ್ಷೇತ್ರದಿಂದ ಯಾರ ಒತ್ತಡವೂ ಇಲ್ಲದೇ ಸ್ಪರ್ಧೆ ಮಾಡುತ್ತಿದ್ದೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿಂದ ಬೇಕಾದರೂ ಸ್ಪರ್ಧೆ ಮಾಡಬಹುದು. ನಾನು ಲಿಂಗಾಯತ ಸಮುದಾಯಕ್ಕೆ ಸೇರಿದವನಾಗಿದ್ದು, ನನ್ನದು ಮನುಷ್ಯ ಧರ್ಮ ಎಂದು ಹೇಳಿದ್ದಾರೆ.

Last Updated 23, Apr 2018, 12:41 PM IST