ಈಗಾಗಲೇ ಮೇ 17 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವೆ ಎಂದು ವಿಶ್ವಾಸದಿಂದ ನುಡಿಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಇದೀಗ ಸಚಿವ ಸಂಪುಟ ರಚನೆ ಕುರಿತು ಮಾತನಾಡಿದ್ದಾರೆ.
ವಿಜಯಪುರ: ಈಗಾಗಲೇ ಮೇ 17 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವೆ ಎಂದು ವಿಶ್ವಾಸದಿಂದ ನುಡಿಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಇದೀಗ ಸಚಿವ ಸಂಪುಟ ರಚನೆ ಕುರಿತು ಮಾತನಾಡಿದ್ದಾರೆ. ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಹೇಳಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬಿಜೆಪಿ 150 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ. ಮೇ 17ರಂದು ನಾನು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಮ್ಮಿಶ್ರ ಸರ್ಕಾರದ ಕನಸು ಕಾಣುತ್ತಿರುವ ಎಚ್ಡಿಕೆ: ಈ ಬಾರಿ ಜೆಡಿಎಸ್ 20 ಸ್ಥಾನಗಳಿಗಿಂತಲೂ ಹೆಚ್ಚಿನ ಸ್ಥಾನ ಗೆಲ್ಲಲು ಸಾಧ್ಯವಿಲ್ಲ. ಕುಮಾರಸ್ವಾಮಿ ಕನಸು ಕಾಣುತ್ತಿದ್ದಾರೆ ಎಂದು ಬಿಎಸ್‌ವೈ ವ್ಯಂಗ್ಯವಾಡಿದರು.
