ಎಚ್‌.ಡಿ.ಕುಮಾರಸ್ವಾಮಿ ನಡೆಸಿದ ಚೊಚ್ಚಲ ಮಾಧ್ಯಮ ಗೋಷ್ಠಿಯಲ್ಲಿಯೇ ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ಅವರಿಗೆ ನೇರವಾಗಿ ರಾಜಕೀಯಕ್ಕೆ ಬನ್ನಿ ಎಂದು ಕರೆ ನೀಡುವ ಮೂಲಕ ಉದ್ಧಟತನ ಪ್ರದರ್ಶಿಸಿರುವುದು ದುರಹಂಕಾರದ ಪರಮಾವಧಿಯಾಗಿದೆ.  

ಬೆಂಗಳೂರು: ಎಚ್‌.ಡಿ.ಕುಮಾರಸ್ವಾಮಿ ನಡೆಸಿದ ಚೊಚ್ಚಲ ಮಾಧ್ಯಮ ಗೋಷ್ಠಿಯಲ್ಲಿಯೇ ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ಅವರಿಗೆ ನೇರವಾಗಿ ರಾಜಕೀಯಕ್ಕೆ ಬನ್ನಿ ಎಂದು ಕರೆ ನೀಡುವ ಮೂಲಕ ಉದ್ಧಟತನ ಪ್ರದರ್ಶಿಸಿರುವುದು ದುರಹಂಕಾರದ ಪರಮಾವಧಿಯಾಗಿದೆ. 

ಪ್ರಕರಣ ಕೈ ಮೀರುವ ಮುನ್ನವೇ ಮುಖ್ಯಮಂತ್ರಿಗಳು ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳ ಈ ಹೇಳಿಕೆಯು ಸಮಸ್ತ ಮಠಾಧೀಶರು ಹಾಗೂ ಸ್ವಾಮೀಜಿಗಳಿಗೆ ಮಾಡಿದ ಅಪಮಾನ. ಮಾರ್ಗದರ್ಶನ ಮಾಡುವ ಸ್ವಾಮೀಜಿಗಳ ಬಗ್ಗೆ ಹಗುರವಾಗಿ ಮಾತನಾಡಿರುವುದು ಅಕ್ಷಮ್ಯ ಅಪರಾಧ. 

ಇಡೀ ನಾಡಿನ ಜನತೆ, ಗುರು ಪರಂಪರೆ ಮತ್ತು ಗುರು ಪರಂಪರೆಯಲ್ಲಿ ನಂಬಿಕೆ ಇಟ್ಟಿರುವವರಿಗೆ ಮಾಡಿದ ದ್ರೋಹವಾಗಿದೆ. ಜನರು ನಿಮ್ಮನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.