ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡುವುದು ಬಹುತೇಕ ಖಚಿತವಾದಂತಾಗಿದೆ. 

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡುವುದು ಬಹುತೇಕ ಖಚಿತವಾದಂತಾಗಿದೆ. ಬಹುಮತ ಸಾಬೀತಿಗಿಂತ ರಾಜೀನಾಮೆ ಸೂಕ್ತ ಎಂಬ ನಿರ್ಧಾರ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ಯಡಿಯೂರಪ್ಪ ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಹುಮತ ಸಾಬೀತಿಗೆ ಕೆಲ ಕ್ಷಣಗಳು ಬಾಕಿ ಇರುವ ಈ ಸಂದರ್ಭದಲ್ಲಿ ಯಡಿಯೂರಪ್ಪ ಈ ನಿರ್ಧಾರ ಮಾಡಿದ್ದಾರೆ. 

ಕಳೆದ ಬಾರಿ ಒಂದು ವಾರಗಳ ಕಾಲ ಸಿಎಂ ಆಗಿ ಆಡಳಿತ ನಡೆಸಿದ್ದ ಯಡಿಯೂರಪ್ಪ ಇದೀಗ ಮೂರು ದಿನಗಳಿಗೆ ರಾಜೀನಾಮೆ ನೀಡಲಿದ್ದಾರೆ. 

ಯಡಿಯೂರಪ್ಪ ಅವರಿಂದ ಮುಖ್ಯಮಂತ್ರಿ ಸ್ಥಾನ ತೆರವಾದಲ್ಲಿ ಎಚ್.ಡಿ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ.