ಚರ್ಮಗಂಟು ರೋಗ: ಬೆಳಗಾವಿ ಜಿಲ್ಲೆಗೆ 10 ಕೋಟಿ ಪರಿಹಾರ, ಸಚಿವ ಚವ್ಹಾಣ್
ಬೆಳಗಾವಿ ಜಿಲ್ಲೆಯಲ್ಲಿ 43000ಕ್ಕೂ ಮೇಲ್ಪಟ್ಟ ಜಾನುವಾರುಗಳು ಚರ್ಮಗಂಟು ರೋಗ ಪೀಡಿತವಾಗಿದ್ದು, ಉತ್ತಮ ಚಿಕಿತ್ಸೆಯಿಂದ 25000ಕ್ಕೂ ಹೆಚ್ಚು ಜಾನುವಾರು ಗುಣಮುಖ ಹೊಂದಿವೆ. 5200 ಜಾನುವಾರುಗಳು ಮೃತಪಟ್ಟಿವೆ. ಮೃತಪಟ್ಟ ಜಾನುವಾರುಗಳ ಮಾಲೀಕರುಗಳಿಗೆ ಪರಿಹಾರವನ್ನು ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ: ಸಚಿವ ಚವ್ಹಾಣ್
ಬೆಳಗಾವಿ(ಡಿ.20): ಚರ್ಮಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟ ಪ್ರಕರಣದಲ್ಲಿ ಮಾಲೀಕರುಗಳಿಗೆ ಆಗುವ ಆರ್ಥಿಕ ನಷ್ಟತಪ್ಪಿಸಲು ಬೆಳಗಾವಿ ಜಿಲ್ಲೆಗೆ 10 ಕೋಟಿ ಪರಿಹಾರ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದರು. ಬೆಳಗಾವಿ ತಾಲ್ಲೂಕಿನ ಖನಗಾವಿ ಬಿ.ಕೆ, ಖನಗಾವಿ ಕೆ.ಎಚ್ ಗ್ರಾಮಗಳಲ್ಲಿ ಚರ್ಮಗಂಟು ರೋಗ ಪೀಡಿತ ಜಾನುವಾರುಗಳನ್ನು ಪರಿಶೀಲನೆ ನಡೆಸಿ, ಹುಕ್ಕೇರಿ ತಾಲ್ಲೂಕಿನ ಬೆಳವಿಯಲ್ಲಿರುವ ಜಿಲ್ಲಾ ಸರ್ಕಾರಿ ಗೋಶಾಲೆಗೆ ಭೇಟಿ ನೀಡಿ ಮಾತನಾಡಿದರು. ಜಿಲ್ಲೆಯಲ್ಲಿ 43000ಕ್ಕೂ ಮೇಲ್ಪಟ್ಟ ಜಾನುವಾರುಗಳು ಚರ್ಮಗಂಟು ರೋಗ ಪೀಡಿತವಾಗಿದ್ದು, ಉತ್ತಮ ಚಿಕಿತ್ಸೆಯಿಂದ 25000ಕ್ಕೂ ಹೆಚ್ಚು ಜಾನುವಾರು ಗುಣಮುಖ ಹೊಂದಿವೆ. 5200 ಜಾನುವಾರುಗಳು ಮೃತಪಟ್ಟಿವೆ. ಮೃತಪಟ್ಟ ಜಾನುವಾರುಗಳ ಮಾಲೀಕರುಗಳಿಗೆ ಪರಿಹಾರವನ್ನು ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. ಚಿಕಿತ್ಸೆ ಮತ್ತು ಪರಿಹಾರ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದರು.
ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಪತ್ತೆಯಾಗಿದ್ದು, 1.75 ಲಕ್ಷಕ್ಕೂ ಮೇಲ್ಪಟ್ಟಜಾನುವಾರುಗಳಲ್ಲಿ ಚೇತರಿಕೆ ಕಂಡು ಬಂದಿದೆ. 21000 ಜಾನುವಾರುಗಳು ಚರ್ಮಗಂಟು ರೋಗದಿಂದ ಮೃತಪಟ್ಟಿವೆ. ರೈತರು ಆತಂಕಕ್ಕೆ ಒಳಗಾಗದೇ ಸರ್ಕಾರದೊಂದಿಗೆ ಸಹಕಾರ ನೀಡುತ್ತಿದ್ದಾರೆ. ಚರ್ಮಗಂಟು ರೋಗದಿಂದ ಉಂಟಾಗುವ ಜಾನುವಾರುಗಳ ಮರಣದಿಂದ ರೈತರ ಅಥವಾ ಜಾನುವಾರು ಮಾಲೀಕರಿಗೆ ನಷ್ಟವನ್ನು ಭರಿಸಲು 2022ರ ಆಗಷ್‌್ಟ1ರಿಂದ ಅನ್ವಯ ಆಗುವಂತೆ ಪ್ರತಿ ಹೈನು ರಾಸುಗೆ ಗರಿಷ್ಠ . 20 ಸಾವಿರ, ಎತ್ತುಗೆ . 30 ಸಾವಿರ ಹಾಗೂ ಪ್ರತಿ ಕರುವಿಗೆ . 5000 ಪರಿಹಾರ ನೀಡಲಾಗುತ್ತಿದೆ. ಚರ್ಮಗಂಟು ರೋಗವನ್ನು ಹತೋಟಿ ತರಲಾಗುತ್ತಿದೆ. ರಾಜ್ಯಾದ್ಯಂತ 67 ಲಕ್ಷ ರಾಸುಗಳಿಗೆ ಲಸಿಕೆ ನೀಡಲಾಗಿದ್ದು, ಲಭ್ಯವಿರುವ 23 ಲಕ್ಷ ಡೋಸ್ ಲಸಿಕೆಯನ್ನು ನೀಡಲಾಗುತ್ತಿದೆ. ಜಾನುವಾರುಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ರೈತರಲ್ಲಿ ಈ ಕುರಿತು ಜಾಗೃತಿ ಮತ್ತು ಅರಿವು ಮೂಡಿಸಲಾಗುತ್ತಿದೆ ಎಂದು ಸಚಿವ ಚವ್ಹಾಣ್ ಹೇಳಿದರು.
ಫೋಟೋ ವಿವಾದ: ಕಾಂಗ್ರೆಸ್ ಧರಣಿ, ಸಭೆಗೆ ಬಹಿಷ್ಕಾರ
ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡು ಬಂದ ತಕ್ಷಣ ಗೋಪ್ರೇಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಆಸಕ್ತಿ ವಹಿಸಿ ಚಿಕಿತ್ಸೆ ಹಾಗೂ ಔಷಧೋಪಚಾರಕ್ಕೆ . 7 ಕೋಟಿ ಮತ್ತು ರೈತರಿಗೆ ಪರಿಹಾರ ನೀಡಲು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಮ್ಮ ರಾಜ್ಯ ಸರ್ಕಾರ . 37 ಕೋಟಿ ಹಣ ನೀಡಿದೆ ಎಂದು ಸಚಿವರು ವಿವರಿಸಿದರು.
ರೈತರೊಂದಿಗೆ ಸಂವಾದ ನಡೆಸಿದ ಸಚಿವ ಪ್ರಭು ಚವ್ಹಾಣ್ ಅವರು, ಖನಗಾವಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಪಶುಸಂಗೋಪನೆ ಇಲಾಖೆಯಿಂದ ಕೈಗೊಂಡ ಔಷಧೋಪಚಾರ, ಚಿಕಿತ್ಸೆ ಮತ್ತು ಪರಿಹಾರ ಕಾರ್ಯಗಳ ಕುರಿತು ಮಾಹಿತಿ ಪಡೆದು, ಸರ್ಕಾರ ನಿಮ್ಮೊಂದಿಗಿದೆ ಎಂದು ಅಭಯ ನೀಡಿದರು.
ಶೀಘ್ರ ಸ್ಪಂದನೆಗೆ ತಾಕೀತು: ರೈತರಿಂದ ಜಾನುವಾರುಗಳ ಆರೋಗ್ಯ ಸಮಸ್ಯೆ ಕುರಿತು ಕರೆ ಬಂದ ತಕ್ಷಣ ಕೂಡಲೇ ಪಶು ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಪಶು ಸಂಜೀವಿನಿ ಆ್ಯಂಬುಲೆನ್ಸ್ ವಾಹನದಲ್ಲಿ ತೆರಳಿ ತುರ್ತು ಚಿಕಿತ್ಸೆ ನೀಡಬೇಕು. ಯಾವುದೇ ಕಾರಣಕ್ಕೂ ಪಶು ವೈದ್ಯಾಧಿಕಾರಿಗಳ ಮೊಬೈಲ… ಸ್ವೀಚ್‌್ಡ ಆಫ್ ಆಗದಂತೆ ತಾಕೀತು ಮಾಡಿದರು.
ಸ್ಥಳದಲ್ಲೇ ಪಶುಸಂಗೋಪನೆ ಇಲಾಖಾ ಅಧಿಕಾರಿಗಳು, ಪಶು ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಪ್ರಭು ಚವ್ಹಾಣ್ ಅವರು, ರೈತರ ಕರೆಗಳಿಗೆ ನಿರ್ಲಕ್ಷ್ಯ ಮಾಡದೇ ಕೂಡಲೇ ಸ್ಪಂದಿಸಬೇಕು. ಜಾನುವಾರುಗಳ ಆರೋಗ್ಯ ಸಮಸ್ಯೆಗೆ ಸ್ಪಂದಿಸದೇ ನಿರ್ಲಕ್ಷ್ಯ ಮಾಡುವ ಪಶುವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಯಾವುದೇ ಮುಲಾಜಿಲ್ಲದೇ ಅಮಾನತು ಮಾಡುತ್ತೇನೆ ಎಂದು ತರಾಟೆ ತೆಗೆದುಕೊಂಡರು.
ಶೀಘ್ರದಲ್ಲೇ ಗೋಶಾಲೆ ಲೋಕಾರ್ಪಣೆ: ಹುಕ್ಕೇರಿ ತಾಲ್ಲೂಕಿನ ಬೆಳವಿಯಲ್ಲಿರುವ ಬೆಳಗಾವಿ ಜಿಲ್ಲಾ ಸರ್ಕಾರಿ ಗೋಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರದಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಬಾಕಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಡಿಸೆಂಬರ ಅಂತ್ಯದಲ್ಲಿ ಜಿಲ್ಲಾ ಸರ್ಕಾರಿ ಗೋಶಾಲೆ ಲೋಕಾರ್ಪಣೆಗೊಳಿಸೋಣ ಎಂದರು. ಈ ಸಂದರ್ಭದಲ್ಲಿ ಇಲಾಖೆ ನಿರ್ದೇಶಕ ಡಾ.ಮಂಜುನಾಥ್ ಪಾಳೇಗಾರ, ಬೆಳಗಾವಿ ಜಿಲ್ಲಾ ಉಪ ನಿರ್ದೇಶಕ ಡಾ.ರಾಜು ಕೂಲೇರೆ, ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಡಾ.ಪರಮೇಶ ನಾಯ್‌್ಕ ಸೇರಿದಂತೆ ಗ್ರಾಮಸ್ಥರಿದ್ದರು.
ವಿಧಾನ ಪರಿಷತ್: ಸಭಾಪತಿ ಹುದ್ದೆಗೆ ಬಿಜೆಪಿ ಅಭ್ಯರ್ಥಿ ಹೊರಟ್ಟಿ ಫೈನಲ್
ಅಭಿನಂದನೆ:
ಜಾನುವಾರುಗಳು ಮೃತಪಟ್ಟನಂತರದಲ್ಲಿ ನಮಗೆ ಎದುರಾದ ಆರ್ಥಿಕ ನಷ್ಟವನ್ನು ಭರಿಸಲು ಸರ್ಕಾರ ನಮಗೆ ಪರಿಹಾರ ನೀಡಿದ್ದರಿಂದ ನಮ್ಮ ಕಷ್ಟಕ್ಕೆ ಉಪಕಾರವಾಯಿತು ಎಂದು ಖನಗಾವಿ ಸುತ್ತಮುತ್ತಲಿನ ಗ್ರಾಮಸ್ಥರು ಸಚಿವ ಪ್ರಭು ಚವ್ಹಾಣ್ ಅವರಿಗೆ ಮಾಲಾರ್ಪಣೆ ಮಾಡಿ ಸನ್ಮಾನಿಸಿ, ಅಭಿನಂದಿಸಿದರು.
ಉಮೇಶ ಕತ್ತಿ ನಿವಾಸಕ್ಕೆ ಭೇಟಿ:
ಬೆಳಗಾವಿಯಲ್ಲಿರುವ ಜಿಲ್ಲಾ ಸರ್ಕಾರಿ ಗೋಶಾಲೆಗೆ ಭೇಟಿ ನೀಡಿದ ವಾಪಸ್ಸಾಗುವ ಸಂದರ್ಭದಲ್ಲಿ ಮಾರ್ಗಮಧ್ಯೆ ಇತ್ತಿಚೆಗೆ ನಿಧನರಾದ ಸಚಿವ ಉಮೇಶ ಕತ್ತಿ ಅವರ ಬೆಲ್ಲದಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ, ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಈ ಸಮಯದಲ್ಲಿ ಶೀಲಾ ಕತ್ತಿ ಮತ್ತು ಪುತ್ರ ನಿಖೀಲ್ ಇದ್ದರು.