ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನ ಕುಳಿತಿದ್ದರು. ವೇಗದಲ್ಲಿ ಬರುವಾಗ ಗಾಡಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಕಾರವಾರ(ಜ.22): ತರಕಾರಿ ತುಂಬಿದ ಲಾರಿಯೊಂದು ಪಲ್ಟಿಯಾದ ಪರಿಣಾಮ 10 ಜನರು ಸಾವನ್ನಪ್ಪಿ ಹಲವರಿಗೆ ಗಾಯಗಳಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಇಂದು(ಬುಧವಾರ) ಬೆಳಗ್ಗೆ ನಡೆದಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನ ಕುಳಿತಿದ್ದರು. ವೇಗದಲ್ಲಿ ಬರುವಾಗ ಗಾಡಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 9 ಜನರ ಶವಗಳನ್ನ ಪೊಲೀಸರು ಹೊರತೆಗೆದಿದ್ದಾರೆ.
Bengaluru: ನೆಲಮಂಗಲದಲ್ಲಿ ಮತ್ತೊಂದು ಭೀಕರ ಅಪಘಾತ, ಚಲಿಸುತ್ತಿದ್ದ ಲಾರಿಯ ಅಡಿಗೆ ಸಿಲುಕಿದ ಕಾರು!
ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಲ್ಲಾಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
