ಉಪಹಾರ ಸೇವಿಸಿದ ಬಳಿಕ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನ ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ರಾಯಚೂರು(ಸೆ.24): ಕಸ್ತೂರಬಾ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೊಡ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಉಪಹಾರ ಸೇವಿಸಿದ ಬಳಿಕ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನ ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Raichur: ತರಗತಿಯಲ್ಲೇ ಏಕಾಏಕಿ ಲೋ ಬಿಪಿಯಿಂದ 5ನೇ ತರಗತಿ ವಿದ್ಯಾರ್ಥಿ ಸಾವು!
ಇಂದು ಬೆಳಗ್ಗೆ ನೀಡಿದ ಚಿತ್ರಾನ್ನ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ತಿಂಗಳ ಹಿಂದೆಯಷ್ಟೆ ಆಹಾರದಲ್ಲಿ ವಿಷ ಬೇರೆಸಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ನಡೆದಿದೆ. ವಿದ್ಯಾರ್ಥಿಗಳ ಜೀವಕ್ಕೆ ಬೆಲೆಯೇ ಇಲ್ಲವೇ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.