ಚಾಮರಾಜನಗರ(ಜ.10): ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧ ವ್ಯಕ್ತಪಡಿಸಿ ಚಾಮರಾಜನಗರದಲ್ಲಿ ವಾಟಾಳ್ ನಾಗರಾಜ್ ಪ್ರತಿಭಟಿಸಿದ್ದಾರೆ. ನಗರದ ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿ ವಿಧಾನಸೌಧದಲ್ಲಿ ಪ್ರಾಧಿಕಾರದ ಕಚೇರಿ ತೆರೆಯಲು ಬಿಡುವುದಿಲ್ಲ . ಯಡಿಯೂರಪ್ಪ ಸರ್ವಾಧಿಕಾರಿ. ಯಾರ ಮಾತನ್ನು ಕೇಳುವುದಿಲ್ಲ. ಶಾಸನ ಸಭೆಯಲ್ಲಿ ಚರ್ಚಿಸದೆ, ಸಚಿವ ಸಂಪುಟದಲ್ಲಿ ಚರ್ಚಿಸದೆ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.

 

ಪ್ರಾಧಿಕಾರ ರಚನೆ ವಿರೋಧಿಸಿ ಜನವರಿ 30 ರಂದು ರಾಜ್ಯಾದ್ಯಂತ ರೈಲು ಬಂದ್ ಚಳವಳಿ ನಡೆಯಲಿದೆ. 10 ಸಾವಿರ ಕನ್ನಡ ಕಾರ್ಯಕರ್ತರು ಜೈಲಿಗೆ ಹೋಗಲು ಸಿದ್ದ. ಜೈಲ್ ಭರೋ ಚಳವಳಿಗೆ ನಿರ್ಧಾರ

ಬಸವಕಲ್ಯಾಣ ಉಪಚುನಾವಣೆ ಹಿನ್ನಲೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ, ತರಾತುರಿಯಲ್ಲಿ ಅನುಭವ ಮಂಟಪಕ್ಕೆ ಶಂಕುಸ್ಥಾಪನೆ ಮಾಡಲಾಗಿದೆ.  ಯಡಿಯೂರಪ್ಪ ಭ್ರಷ್ಟ ಮುಖ್ಯ ಮಂತ್ರಿ. ಅನುಭವ ಮಂಟಪ ಶಂಕುಸ್ಥಾಪನೆಗೆ ಅವರಿಗೆ ಯಾವುದೇ ನೈತಿಕತೆ ಇಲ್ಲವಾಗಿದೆ ಎಂದು ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.