ಬೆಂಗಳೂರು ಮಳೆ: ನೀರು ನುಗ್ಗಿದ ಮನೆ ಮಾಲೀಕರಿಗೆ 10,000 ಪರಿಹಾರ, ಡಿ.ಕೆ.ಶಿವಕುಮಾರ್

ರಾಜಕಾಲುವೆ ಸ್ವಚ್ಛತೆ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡರು ಕೆಲಸ ಮಾಡುತ್ತಿದ್ದಾರೆ. ಎನ್‌ಡಿರ್ಆಎಫ್ ನಿಧಿ ಸೇರಿ ವಿವಿಧ ಯೋಜ ನೆಗಳ ಅಡಿ ಕೆರೆಗಳ ಸ್ವಚ್ಛತೆ, ಹೂಳು ತೆಗೆಯುವ ಕೆಲಸ ಮಾಡಲಾಗುವುದು. ಶೀಘ್ರದಲ್ಲೇ ಕೆರೆ ನಿರ್ವಹಣಾ ಸಮಿತಿಯ ಸಭೆ ಕರೆಯಲಾಗುವುದು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

10000 compensation for water inundated house owners in Bengaluru Says DCM DK Shivakumar grg

ಬೆಂಗಳೂರು(ಅ.24): ಮಳೆ ನೀರು ಮನೆಗೆ ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜಕಾಲುವೆ ಒತ್ತುವರಿ ಯನ್ನು ನಿರ್ದಾಕ್ಷಿಣ್ಯ ತೆರವುಗೊಳಿಸುವಂತೆ ನಿರ್ದೇಶಿಸಿದ್ದಾರೆ. 

ಬುಧವಾರ ಪ್ರವಾಹದಿಂದ ಹಾನಿಗೀಡಾದ ವಿವಿಧ ಪ್ರದೇಶ ಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಡೆಸಿದ ಅವರು, ವಸತಿ ಇಲ್ಲದವರಿಗೆ ವಾಸಿಸಲು ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. 
ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್, ಬ್ಯಾಟರಾಯನಪುರದ ಮರಿಯಣ್ಣ ಪಾಳ್ಯ, ಕೆ.ಆ‌ರ್.ಪುರದ ಶ್ರೀ ಸಾಯಿ ಲೇಔಟ್‌ಗೆ ಭೇಟಿ ನೀಡಿ ಪರಿಹಾರ ಕಾರ್ಯ ವೀಕ್ಷಿಸಿ, ಅಪಾರ್ಟ್‌ಮೆಂಟ್ ನಿವಾಸಿಗಳ ಸಂಘದ ಪದಾಧಿ ಕಾರಿಗಳೊಂದಿಗೆ ಚರ್ಚಿಸಿದರು. 

ಮಳೆ ಎಫೆಕ್ಟ್‌: ಮನೆಮನೆಯಿಂದ ಕಸ ಸಂಗ್ರಹ ಬಂದ್‌, ಗಬ್ಬೆದ್ದು ನಾರುತ್ತಿರುವ ಸಿಲಿಕಾನ್‌ ಸಿಟಿ ಬೆಂಗ್ಳೂರು!

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾಲುವೆ ಸ್ವಚ್ಛತೆ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡರು ಕೆಲಸ ಮಾಡುತ್ತಿದ್ದಾರೆ. ಎನ್‌ಡಿರ್ಆಎಫ್ ನಿಧಿ ಸೇರಿ ವಿವಿಧ ಯೋಜ ನೆಗಳ ಅಡಿ ಕೆರೆಗಳ ಸ್ವಚ್ಛತೆ, ಹೂಳು ತೆಗೆಯುವ ಕೆಲಸ ಮಾಡಲಾಗುವುದು. ಶೀಘ್ರದಲ್ಲೇ ಕೆರೆ ನಿರ್ವಹಣಾ ಸಮಿತಿಯ ಸಭೆ ಕರೆಯಲಾಗುವುದು ಎಂದು ಹೇಳಿದರು.

ಮುಲಾಜಿಲ್ಲದೆ ಒತ್ತುವರಿ ತೆರವು 

ಅನೇಕ ಕಡೆ ಖಾಸಗಿಯವರು ರಾಜಕಾಲುವೆ ಒತ್ತುವರಿ ತೆರವುಗೊಳಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ತುರ್ತು ಸಂದರ್ಭದಲ್ಲಿ ಇವುಗಳಿಗೆ ಅವಕಾಶವಿಲ್ಲ. ತೆರವುಗೊಳಿಸಲು ಕಾನೂನಿನಲ್ಲಿ ಅವಕಾಶವಿದೆ. ಯಾವುದನ್ನೂ ಪರಿಗಣಿಸದೆ ಕೂಡಲೇ ಎಲ್ಲ ಒತ್ತುವರಿಗಳನ್ನು ತೆರವುಗೊಳಿಸಿ. ಪ್ರವಾಹ ಪರಿಸ್ಥಿತಿ ನಿರ್ವಹಣೆ ಅಡಿಯಲ್ಲಿ ಕೂಡಲೇ ಆದೇಶ ಹೊರಡಿಸಿ ಎಂದು ಜಿಲ್ಲಾಧಿಕಾರಿಗೆ ನಿರ್ದೇಶಿಸಿ, ಒತ್ತುವರಿ ತೆರವು ಕಾರ್ಯ ಕೂಡಲೇ ಆರಂಭಿ ಸುವಂತೆ ಬಿಬಿಎಂಪಿ ಮತ್ತು ಬಿಡಿಎ ಅಧಿಕಾರಿಗಳಿಗೆ ಆದೇಶಿಸಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

Latest Videos
Follow Us:
Download App:
  • android
  • ios