Chikkaballapur: ಜಲ ಜೀವನ್‌ ಮಿಷನ್‌ ಯೋಜನೆ: ಜಿಲ್ಲೆಗೆ 1050 ಕೋಟಿ ಬಿಡುಗಡೆ

ಜಿಲ್ಲೆಯಲ್ಲಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವ ಬಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಜಲ ಜೀವನ್‌ ಮಿಷನ್‌ ಯೋಜನೆಯನ್ನು ಆಧ್ಯತೆ ಮೇರೆಗೆ ಅನುಷ್ಠಾನಗೊಳಿಸಿ ಪ್ರತಿ ಮನೆಗೂ ನಳ ಸಂಪರ್ಕದ ಮೂಲಕ ನೀಡುವ ಕಾರ್ಯವನ್ನು 2024ರ ವೇಳೆಗೆ ಯೋಜನೆ ಪೂರ್ಣಗೊಳಿಸಬೇಕೆಂದು ಸಂಸದ ಬಿ.ಎನ್‌.ಬಚ್ಚೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

1050 crore released to Chikkaballapur district for Jal Jeevan Mission Project gvd

ಚಿಕ್ಕಬಳ್ಳಾಪುರ (ಡಿ.01): ಜಿಲ್ಲೆಯಲ್ಲಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವ ಬಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಜಲ ಜೀವನ್‌ ಮಿಷನ್‌ ಯೋಜನೆಯನ್ನು ಆಧ್ಯತೆ ಮೇರೆಗೆ ಅನುಷ್ಠಾನಗೊಳಿಸಿ ಪ್ರತಿ ಮನೆಗೂ ನಳ ಸಂಪರ್ಕದ ಮೂಲಕ ನೀಡುವ ಕಾರ್ಯವನ್ನು 2024ರ ವೇಳೆಗೆ ಯೋಜನೆ ಪೂರ್ಣಗೊಳಿಸಬೇಕೆಂದು ಸಂಸದ ಬಿ.ಎನ್‌.ಬಚ್ಚೇಗೌಡ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷತೆ ವಹಿಸಿ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜಲ ಜೀವನ್‌ ಮಿಷನ್‌ನಡಿ ಒಟ್ಟು 590 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ ಎಂದರು.

2024ರ ವೇಳೆಗೆ ಎಲ್ಲ ಮನೆಗೆ ನಲ್ಲಿ: 2019ರಲ್ಲಿ ಜಲ್‌ ಜೀವನ್‌ ಮಿಷನ್‌ ಯೋಜನೆ ಆರಂಭವಾದರೂ ಚಿಕ್ಕಬಳ್ಳಾಪುರ ಜಿಲ್ಲೆಗೆ 2021 ರಲ್ಲಿ ಯೋಜನೆ ಅನುಮೋದನೆಯಾಗಿದೆ. ಈ ಯೋಜನೆಯಲ್ಲಿ ಸಾಕಷ್ಟುಅನುದಾನ ಲಭ್ಯವಿದ್ದು, ಜಲ ಜೀವನ್‌ ಮಿಷನ್‌ನಡಿ ಜಿಲ್ಲೆಗೆ ಒಟ್ಟು 1050 ಕೋಟಿಗೆ ಕ್ರಿಯಾ ಯೋಜನೆ ಜಿಲ್ಲೆಗೆ ಅನುಮೋದನೆಯಾಗಿದೆ. ಇದರಲ್ಲಿ 4.22 ಕೋಟಿ ಹಣ ವೆಚ್ಚವಾಗಿ ಕೆಲವು ಕುಟುಂಬಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗಿದೆ. 2024ರ ವೇಳೆಗೆ ಜಿಲ್ಲೆಯ ಎಲ್ಲರಿಗೂ ಈ ಯೋಜನೆಯಡಿ ಶುದ್ಧ ಕುಡಿಯುವ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚಿಸಿದರು.

Chikkaballapur: ಎಎಸ್‌ಐ ಮನೆ ದರೋಡೆ ನಡೆಸಿದ್ದ ಅಂತರಾಜ್ಯ ಕಳ್ಳರ ಬಂಧನ

ಬೆಳೆಗಳನ್ನು ಬದಲಾಯಿಸಿ ಬೆಳೆ ಇಡುವ ಕೃಷಿ ಪದ್ದತಿ ಮತ್ತು ಮಿಶ್ರಬೆಳೆ ಕೃಷಿ ಪದ್ದತಿಗಳನ್ನು ಅಳವಡಿಕೊಳ್ಳಲು ಕೃಷಿ ಅಧಿಕಾರಿಗಳು ರೈತರಿಗೆ ಮಾಹಿತಿ ನೀಡಿ ಉತ್ತೇಜನ ನೀಡಬೇಕು. ಪ್ರಸಕ್ತ ಸಾಲಿನಲ್ಲಿ ಮಣ್ಣು ಮಾದರಿ ಸಂಗ್ರಹಣೆ ಮಾಡಿ 4,989 ರೈತರಿಗೆ ಮಣ್ಣು ಆರೋಗ್ಯ ಚೀಟಿ ನೀಡಲಾಗಿದೆ. ನರೇಗಾ ಯೋಜನೆಯಡಿ ಪ್ರಸಕ್ತ ಸಾಲಿಗೆ ಜಿಲ್ಲೆಗೆ 50 ಲಕ್ಷ ಮಾನವ ದಿನಗಳ ಸೃಜನೆಗೆ ಗುರಿ ನೀಡಲಾಗಿದ್ದು, ಈವರೆಗೆ ಈಗಾಗಲೇ 25 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ. ಬಾಕಿ ಗುರಿಯನ್ನು ಮುಂದಿನ ದಿನಗಳಲ್ಲಿ ಸಾಧಿಸಲು ತಿಳಿಸಿದರು.

ಒಕ್ಕಲಿಗರ ಮೀಸಲಾತಿ ಹೋರಾಟದಿಂದ ಅಂತರ ಕಾಯ್ದಕೊಂಡಿತೆ ಜೆಡಿಎಸ್‌?

ಶಿಡ್ಲಘ್ಟಟ, ಚಿಂತಾಮಣಿಗೆ ಡಯಾಲಿಸಿಸ್‌ ಯಂತ್ರ: ಸಭೆಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್‌.ಮುನಿಸ್ವಾಮಿ ಮಾತನಾಡಿ, ಜಿಲ್ಲೆಯ ಸಾಮಾನ್ಯ ಜನರಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಔಷಧಿಗಳನ್ನು ನೀಡುವ ಸಲುವಾಗಿ ಕೇಂದ್ರ ಸರ್ಕಾರವು ಜನೌಷಧಿ ಕೇಂದ್ರಗಳನ್ನು ತರೆಯಲಾಗಿದೆ. ಇದೇ ರೀತಿ ಜಿಲ್ಲೆಯ ಹೋಬಳಿ ಮಟ್ಟದಲ್ಲಿ ಒಂದೊಂದು ಜನೌಷಧಿ ಕೇಂದ್ರಗಳನ್ನು ತೆರೆದು ಸಾರ್ವಜನಿಕರಿಗೆ ಗುಣಮಟ್ಟದ ಔಷಧಿಗಳನ್ನು ನೀಡಬೇಕು. ಅಲ್ಲದೆ ಚಿಂತಾಮಣಿ ಹಾಗೂ ಶಿಡ್ಲಘಟ್ಟಕ್ಕೆ ಡಯಾಲಿಸಿಸ್‌ ಯಂತ್ರಗಳನ್ನು ಕೊಡಿಸುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್‌, ಜಿಪಂ ಸಿಇಒ ಪಿ.ಶಿವಶಂಕರ್‌, ಜಿಪಂ ಯೋಜನಾ ನಿರ್ದೇಶಕರಾದ ಗಿರಿಜಾ ಶಂಕರ್‌, ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್‌ ಕುಮಾರ್‌, ದಿಶಾ ಸಮಿತಿಯ ಸದಸ್ಯರಾದ ಬಿ.ಎನ್.ರಂಗನಾಥ, ಜಿ.ಎಸ್.ಶೋಭಾ, ಲಕ್ಷ್ಮೀನಾರಾಯಣ ಗುಪ್ತ, ರುಕ್ಮಿಣಿಯಮ್ಮ ಸೇರಿದಂತೆ ಎಲ್ಲಾ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

Latest Videos
Follow Us:
Download App:
  • android
  • ios