Mandya: 110 ಅಡಿಯತ್ತ ಕೆಆರ್‌ಎಸ್‌ ಜಲಾಶಯ: ಒಳ ಹರಿವು ಹೆಚ್ಚಳ

ಕೊಡಗು, ಭಾಗಮಂಡಲ ಸೇರಿದಂತೆ ಕಾವೇರಿ ಕೊಳ್ಳದಲ್ಲಿ ಕೆಲದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿ ಅಣೆಕಟ್ಟೆ110 ಅಡಿಯಷ್ಟು ನೀರು ಸಂಗ್ರಹವಾಗಿದೆ. 

110 feet of water in krs dam at mandya gvd

ಮಂಡ್ಯ (ಜು.04): ಕೊಡಗು, ಭಾಗಮಂಡಲ ಸೇರಿದಂತೆ ಕಾವೇರಿ ಕೊಳ್ಳದಲ್ಲಿ ಕೆಲದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿ ಅಣೆಕಟ್ಟೆ110 ಅಡಿಯಷ್ಟು ನೀರು ಸಂಗ್ರಹವಾಗಿದೆ. ಭಾನುವಾರ ಸಂಜೆ 6 ಗಂಟೆ ವೇಳೆಗೆ ಅಣೆಕಟ್ಟೆಯಲ್ಲಿ 109.52 ಅಡಿ ನೀರಿತ್ತು. ಜಲಾಶಯಕ್ಕೆ 13,418 ಕ್ಯುಸೆಕ್‌ ನೀರು ಒಳ ಹರಿವಿತ್ತು. 1258 ಕ್ಯುಸೆಕ್‌ ನೀರನ್ನು ಬಿಡಲಾಗುತ್ತಿತ್ತು. ಬೆಳಗ್ಗೆ ವೇಳೆಗೆ ಇನ್ನಷ್ಟುಒಳ ಹರಿವಿನ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ. 

ಇದರಿಂದ ಜಲಾಶಯ 110 ಅಡಿ ದಾಟುವ ಸಾಧ್ಯತೆ ಇದೆ. ಕೊಡಗು, ಭಾಗಮಂಡಲ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗುತ್ತಿರುವುದರಿಂದ ಕಳೆದ ಒಂದು ವಾರದಿಂದ ಈಚೆಗೆ ಸುಮಾರು 8 ಅಡಿಗಳಷ್ಟುನೀರು ಸಂಗ್ರಹವಾಗಿದೆ. ಸದ್ಯ ಜಲಾಶಯದಲ್ಲಿ 31.242 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಟಮಟ್ಟ124.80 ಅಡಿಯಾಗಿದೆ. ಕಳೆದ ವರ್ಷ ಇದೇ ದಿನ 17.41 ಟಿಎಂಸಿ ನೀರು ಸಂಗ್ರಹವಾಗಿತ್ತು. ಕಳೆದ ವರ್ಷ ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಹೆಚ್ಚು ಸುರಿದ ಕಾರಣ ಬೇಸಿಗೆ ಬೆಳೆಗಳಿಗೆ ಹೆಚ್ಚು ನೀರಿನ ಬೇಡಿಕೆ ಸೃಷ್ಟಿಯಾಗಲಿಲ್ಲ. 

ನಕಲಿ ಗೊಬ್ಬರ ಮಾರಾಟ ಕಂಡು ಬಂದರೆ ಕ್ರಿಮಿನಲ್‌ ಮೊಕದ್ದಮೆ: ಸಚಿವ ಗೋಪಾಲಯ್ಯ

ಅಲ್ಲದೇ, ಅಣೆಕಟ್ಟೆಯಲ್ಲಿ ಈ ಬಾರಿ ಮೇ, ಜೂನ್‌ ತಿಂಗಳೂ ಬಂದರೂ ಕೂಡ 100 ಅಡಿಯಷ್ಟುನೀರನ್ನು ಕಾಪಾಡಿಕೊಂಡು ಬಂದಿದೆ. ನೆರೆಯ ರಾಜ್ಯ ತಮಿಳುನಾಡಿಗೂ ಕೂಡ ಪ್ರತಿ ತಿಂಗಳು ನಿಗದಿಪಡಿಸಿದ ಕೋಟಾದಡಿಯಷ್ಟೆನೀರು ಹರಿದರೂ ಕೂಡ ಅಣೆಕಟ್ಟೆಯಲ್ಲಿ ಮಾತ್ರ ನೀರು ಕಡಿಮೆಯಾಗಿರಲಿಲ್ಲ. ಈ ವರ್ಷವೂ ಬಹುಬೇಗ ಅಣೆಕಟ್ಟೆತುಂಬುವ ಸಾಧ್ಯತೆ ಹೆಚ್ಚಳವಾಗಿದೆ. ಜೂನ್‌ ತಿಂಗಳವರೆವಿಗೂ ಗರಿಷ್ಠ ಪ್ರಮಾಣದ ನೀರು ಅಣೆಕಟ್ಟೆಯಲ್ಲಿ ಸಂಗ್ರಹವಾಗಿರುವುದು ಕೂಡ ದಾಖಲೆಯಾಗಿದೆ.

ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿ: ಕೊಡಗು ಜಿಲ್ಲೆಯಾದ್ಯಂತ ಭಾನುವಾರವೂ ಮಳೆ ಮುಂದುವರಿದಿದ್ದು, ತಲಕಾವೇರಿ, ಭಾಗಮಂಡಲ ವ್ಯಾಪ್ತಿಯಲ್ಲಿ ಭಾರಿ ಮಳೆ ಬಿದ್ದ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಶನಿವಾರ ರಾತ್ರಿ ಮಳೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಭಾಗಮಂಡಲ- ನಾಪೋಕ್ಲು ರಸ್ತೆ ಮೇಲೆ ಕಾವೇರಿ ನದಿ ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಭಾನುವಾರ ಮಳೆಯ ರಭಸ ಕಡಿಮೆಯಾದ ಹಿನ್ನೆಲೆಯಲ್ಲಿ ಭಾಗಮಂಡಲದಲ್ಲಿ ನೀರಿನ ಮಟ್ಟಕೊಂಚ ಕಡಿಮೆಯಾಗಿದೆ. 

ರಾತ್ರಿ ಹೆಚ್ಚು ಮಳೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ಜಲಾಶಯ ಹಾರಂಗಿಗೆ ಹೆಚ್ಚಿನ ಒಳ ಹರಿವು ಬಂದಿದ್ದು, 15 ಸಾವಿರ ಕ್ಯುಸೆಕ್‌ ಪ್ರಮಾಣದ ನೀರನ್ನು ನದಿಗೆ ಹರಿಸಲಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯ ಅಲ್ಲಲ್ಲಿ ಗಾಳಿ ಸಹಿತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮರ, ವಿದ್ಯುತ್‌ ಕಂಬಗಳು ಧರೆಗೆ ಬಿದ್ದು ವಿದ್ಯುತ್‌ ಮಾರ್ಗಕ್ಕೆ ಹಾನಿಯಾಗಿದ್ದು, ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.

ಮಂಡ್ಯದಲ್ಲಿ ಪುಡಿರೌಡಿಗಳ ಹಾವಳಿ: ಅಡ್ಡಾದಿಡ್ಡಿ ಬೈಕ್ ಚಾಲನೆ ಪ್ರಶ್ನಿಸಿದ್ದಕ್ಕೆ ವೃದ್ಧನ ಮೇಲೆ ಹಲ್ಲೆ

ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ
ಗರಿಷ್ಠ ಮಟ್ಟ- 124.80 ಅಡಿ
ಇಂದಿನ ಮಟ್ಟ- 109.52 ಅಡಿ
ಒಳಹರಿವು - 13,418 ಕ್ಯುಸೆಕ್‌
ಹೊರಹರಿವು - 1258 ಕ್ಯುಸೆಕ್‌
ನೀರಿನ ಸಂಗ್ರಹ - 31.242 ಟಿಎಂಸಿ

Latest Videos
Follow Us:
Download App:
  • android
  • ios