ಗರಿಷ್ಠ 519.60 ಮೀಟರ್‌ ನೀರು ಸಂಗ್ರಹಣೆ ಸಾಮರ್ಥ್ಯದ ಅಣೆಕಟ್ಟೆಯಲ್ಲಿ ಸದ್ಯ 515.39 ಮೀಟರ್‌ ನೀರು ಸಂಗ್ರಹವಿದೆ. ಅಂದರೆ ಆಲಮಟ್ಟಿ ಅಣೆಕಟ್ಟೆಯಲ್ಲಿ 123.081 ಟಿಎಂಸಿ ಸಂಗ್ರಹ ಸಾಮರ್ಥ್ಯದ ಅಣೆಕಟ್ಟೆಯಲ್ಲಿ ಸದ್ಯಕ್ಕೆ 66.794 ಟಿಎಂಸಿ ನೀರು ಸಂಗ್ರಹವಿದೆ. ಹೊರಹರಿವು 8,000 ಕ್ಯುಸೆಕ್‌ ಇದೆ.

ವಿಜಯಪುರ(ಜು.25):  ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಕಳೆದ ಹಲವಾರು ದಿನಗಳಿಂದ ಸತತ ಮಳೆ ಸುರಿಯುತ್ತಿರುವುದರಿಂದ ಕೃಷ್ಣಾ ನದಿ ಪಾತ್ರದಲ್ಲಿ 1,14,252 ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಡೆಡ್‌ ಸ್ಟೋರೆಜ್‌ಗೆ ತಲುಪಿದ್ದ ಅಣೆಕಟ್ಟೆಯಲ್ಲಿ ಈಗ ಅರ್ಧ ಅಣೆಕಟ್ಟೆ ಭರ್ತಿಯಾಗಿದೆ. ಆಲಮಟ್ಟಿ ಅಣೆಕಟ್ಟೆಗೆ ಸದ್ಯ 25802 ಕ್ಯುಸೆಕ್‌ ನೀರು ತಲುಪಿದೆ.

ಮಹಾರಾಷ್ಟ್ರ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಕೋಯ್ನಾ ಭಾಗದಲ್ಲಿ 150 ಮಿ.ಮೀ., ನವುಜಾ-214 ಮಿ.ಮೀ., ಮಹಾಬಳೇಶ್ವರ- 189 ಮಿ.ಮೀ., ರಾಧಾ ನಗರಿ- 142 ಮಿ.ಮೀ., ವಾರಣಾ-76 ಮಿ.ಮೀ., ದೂಧಗಂಗಾ- 97 ಮಿ.ಮೀ., ತರಳಿ- 56 ಮಿ.ಮೀ. ಮಳೆಯಾದ ವರದಿಯಾಗಿದೆ. ರಾಜಾಪೂರ ಬ್ಯಾರೇಜ್‌ನಿಂದ 87,500 ಕ್ಯೂ.ನೀರು ಬಿಡಲಾಗುತ್ತಿದೆ.

ವಿಜಯಪುರದಲ್ಲಿ ಮಳೆರಾಯನ ಆರ್ಭಟ: ಮನೆಯ ಛಾವಣಿ ಕುಸಿದು ವೃದ್ಧೆ ಸಾವು..!

ಗರಿಷ್ಠ 519.60 ಮೀಟರ್‌ ನೀರು ಸಂಗ್ರಹಣೆ ಸಾಮರ್ಥ್ಯದ ಅಣೆಕಟ್ಟೆಯಲ್ಲಿ ಸದ್ಯ 515.39 ಮೀಟರ್‌ ನೀರು ಸಂಗ್ರಹವಿದೆ. ಅಂದರೆ ಆಲಮಟ್ಟಿ ಅಣೆಕಟ್ಟೆಯಲ್ಲಿ 123.081 ಟಿಎಂಸಿ ಸಂಗ್ರಹ ಸಾಮರ್ಥ್ಯದ ಅಣೆಕಟ್ಟೆಯಲ್ಲಿ ಸದ್ಯಕ್ಕೆ 66.794 ಟಿಎಂಸಿ ನೀರು ಸಂಗ್ರಹವಿದೆ. ಹೊರಹರಿವು 8,000 ಕ್ಯುಸೆಕ್‌ ಇದೆ.

ಕಳೆದ 15 ದಿನಗಳ ಹಿಂದೆಯಷ್ಟೇ 18.9 ಟಿಎಂಸಿಯಷ್ಟು ಇದ್ದ ನೀರಿನ ಸಂಗ್ರಹ ಕೆಲವೇ ದಿನಗಳಲ್ಲಿ 66 ಟಿಎಂಸಿ ನೀರು ಸಂಗ್ರಹವಾಗಿದೆ. ಆಲಮಟ್ಟಿ ಅಣೆಕಟ್ಟೆಯಲ್ಲಿ ಹೆಚ್ಚು ನೀರು ಸಂಗ್ರಹವಾಗಿರುವುದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ವಿಜಯಪುರ ಜಿಲ್ಲೆಯಾದ್ಯಂತ ಜಿಟಿಜಿಟಿ ಮಳೆಯಾಗುತ್ತಿದ್ದು, ಮಳೆಯಾಗಿದ್ದರಿಂದ ರೈತರು ಬಿತ್ತನೆಗೆ ಮುಂದಾಗಿದ್ದಾರೆ.

ವೇದಗಂಗಾ, ದೂಧಗಂಗಾ ನದಿಗಳಿಂದಲೂ ಕೃಷ್ಣೆಯ ಒಡಲು ಸೇರುತ್ತಿದೆ ಅಪಾರ ನೀರು

ಚಿಕ್ಕೋಡಿ: ಸಹ್ಯಾದ್ರಿ ಘಟ್ಟಪ್ರದೇಶದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಅಬ್ಬರದಿಂದ ಸುರಿಯುತ್ತಿರುವ ಮಳೆ ಹಾಗೂ ಚಿಕ್ಕೋಡಿ ತಾಲೂಕಿನ ನದಿ ತೀರದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 1,14,252 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಸಂಭವನೀಯ ಪ್ರವಾಹ ಎದುರಿಸಲು ಉಪವಿಭಾಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಉಪವಿಭಾಗಾಧಿಕಾರಿ ಮಾಧವ ಗಿತ್ತೆ ತಿಳಿಸಿದ್ದಾರೆ.

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ದಿಂದ ಕೃಷ್ಣಾ ನದಿಗೆ 87,500 ಕ್ಯುಸೆಕ್‌ ಮತ್ತು ದೂಧಗಂಗಾ ನದಿಯಿಂದ 26,752 ಕ್ಯುಸೆಕ್‌ ಒಟ್ಟು ಕಲ್ಲೋಳ ಬ್ಯಾರೇಜ್‌ ಮೂಲಕ 1,14,252 ಕ್ಯುಸೆಕ್‌ನಷ್ಟುನೀರು ಹರಿದು ಬರುತ್ತಿದೆ. ಕೃಷ್ಣಾ, ದೂಧಗಂಗಾ ಸೇರಿದಂತೆ ಉಪನದಿಗಳಿಗೆ ನಿರಂತರ ನೀರು ಹರಿದು ಬರುತ್ತಿದ್ದು, ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಆಗುತ್ತಿರುವುದರಿಂದ ವೇದಗಂಗಾ, ದೂಧಗಂಗಾ ಮತ್ತು ಕೃಷ್ಣಾ ನದಿಯ ಕೆಳಹಂತದ ಎಲ್ಲ ಬ್ಯಾರೇಜ್‌ಗಳು ಮುಳುಗಡೆಯಾಗಿವೆ.

ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೋಲಿಸರು ನಿರಂತರವಾಗಿ ನದಿ ತೀರದ ಬ್ಯಾರೇಜ್‌ಗಳ ಹತ್ತಿರ ತಾಲೂಕು ಆಡಳಿತಕ್ಕೆ ಮಾಹಿತಿ ನೀಡುವ ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ನದಿ ನೀರಿನ ಮಟ್ಟಏರುತ್ತಿರುವುದರಿಂದ ಸಾರ್ವಜನಿಕರ ನದಿ ತೀರಕ್ಕೆ ಹೋಗಬಾರದು ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಘಟಪ್ರಭಾ, ಮಾಕಂರ್‍ಡೇಯ, ಹಿರಣ್ಯಕೇಶಿಗಳಲ್ಲಿ ಭೋರ್ಗರೆತ

ಮೂಡಲಗಿ: ಪಶ್ಚಿಮಘಟ್ಟ ಹಾಗೂ ಜಿಲ್ಲೆಯಲ್ಲಿ ಬಿಡುವು ನೀಡದೆ ಸುರಿಯುವ ಮಳೆಯಿಂದ ತಾಲೂಕಿನ ಘಟಪ್ರಭಾ ನದಿಗೆ ಹರಿದು ಬರುತ್ತಿರುವ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ತಾಲೂಕಿನ ಮೂರು ಸೇತುವೆಗಳು ಸೋಮವಾರ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ. ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಘಟಪ್ರಭಾ, ಹಿರಣ್ಯಕೇಶಿ, ಮಾಕಂರ್‍ಡೇಯ ನದಿಗಳ ನೀರಿನ ಮಟ್ಟಏರಿಕೆಯಾಗಿದೆ. ಇದರಿಂದ ತಾಲೂಕಿನ ಅವರಾದಿ ಹಾಗೂ ಮಹಾಲಿಂಗಪೂರಕ್ಕೆ ಸಂಪರ್ಕ ಕಲ್ಪಿಸುವ ಅವರಾದಿ ಸೇತುವೆ, ಸುಣಧೋಳಿ ಹಾಗೂ ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸುಣಧೋಳಿ ಸೇತುವೆ, ವಡೇರಹಟ್ಟಿ ಹಾಗೂ ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ವಡೇರಹಟ್ಟಿಸೇತುವೆಗಳು ಜಲಾವೃತಗೊಂಡ ಪರಿಣಾಮ ಸಂಚಾರ ಸ್ಥಗಿತಗೊಂಡು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

Karnataka Rains: ಜುಲೈನಲ್ಲಿ ವಾಡಿಕೆಗಿಂತ ಅಧಿಕ ಮಳೆ: ಸಚಿವ ಕೃಷ್ಣ ಬೈರೇಗೌಡ

ಹಿಪ್ಪರಗಿ ಬ್ಯಾರೇಜ್‌ಗೂ ಅಪಾರ ನೀರು

ರಬಕವಿ-ಬನಹಟ್ಟಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಎಡೆಬಿಡದೇ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಬಕವಿ-ಬನಹಟ್ಟಿತಾಲೂಕಿನಲ್ಲಿ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರಲಾರಂಭಿಸಿದೆ. ಇದೇ ರೀತಿ ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಮಳೆ ಮುಂದುವರೆದರೆ ಕೃಷ್ಣಾ ನದಿ ಪ್ರವಾಹ ಎದುರಾಗಲಿದೆ.

ಸೋಮವಾರ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಲಾಶಯದ ಒಳ ಹರಿವು 1.02 ಲಕ್ಷ ಕ್ಯುಸೆಕ್‌ ಇದ್ದು, ಅಷ್ಟೇ ಪ್ರಮಾಣದ ಹೊರ ಹರಿವಿದೆ. ನೀರಿನ ಮಟ್ಟ 521.35 ಮೀ. ದಾಖಲಾಗಿದೆ. ಹಾಗಾಗಿ ಬಂದಷ್ಟೇ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ ಎಂದು ರಬಕವಿ-ಬನಹಟ್ಟಿ ತಹಶೀಲ್ದಾರ ಡಾ.ಡಿ.ಎಚ್‌.ಹೂಗಾರ ತಿಳಿಸಿದ್ದಾರೆ.