Asianet Suvarna News Asianet Suvarna News

ಬೆಳಗಾವಿಯಲ್ಲಿ 70 ಪತ್ರಕರ್ತರಿಗೆ ಟೆಸ್ಟ್ : 12 ಮಂದಿಗೆ ಸೋಂಕು

 70 ಪತ್ರಕರ್ತರರು ಕೋವಿಡ್‌ ಪರೀಕ್ಷೆ (ಆರ್‌ಟಿ​ಪಿಸಿಆರ್‌) ಮಾಡಿಸಿಕೊಂಡಿದ್ದು, ಅದರಲ್ಲಿ ಹನ್ನೆರಡು ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಹೋಮ್‌ ಐಸೋಲೇಶನ್‌ ಇದ್ದರೆ ಸಾಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಇವರನ್ನು ಸಂಪರ್ಕಿಸಿ ಔಷಧೋಪಚಾರ ಮಾಡಲಿದ್ದಾರೆ. 

12 journalists covid test result positive in belagavi snr
Author
Bengaluru, First Published May 2, 2021, 8:26 AM IST

ಬೆಳಗಾವಿ (ಮೇ.02): ಮೇ 2ರಂದು ಬೆಳಗಾವಿ ಲೋಕಸಭಾ ಉಪಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ಬೆಳಗಾವಿಯ ಸುಮಾರು 70 ಪತ್ರಕರ್ತರರು ಕೋವಿಡ್‌ ಪರೀಕ್ಷೆ (ಆರ್‌ಟಿ​ಪಿಸಿಆರ್‌) ಮಾಡಿಸಿಕೊಂಡಿದ್ದು, ಅದರಲ್ಲಿ ಹನ್ನೆರಡು ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

 ಇದರಲ್ಲಿ ಹನ್ನೊಂದು ಜನರಿಗೆ ಯಾವುದೇ ಲಕ್ಷಣಗಳಿಲ್ಲ(ಅಸಿಂಪ್ಟಮೆಟಿಕ್‌). ಆದಾಗ್ಯೂ ಸರ್ಕಾರದ ಮಾರ್ಗಸೂಚಿ ಪ್ರಕಾರ ಅವರು ಹೋಮ್‌ ಐಸೋಲೇಶನ್‌ ಇದ್ದರೆ ಸಾಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಇವರನ್ನು ಸಂಪರ್ಕಿಸಿ ಔಷಧೋಪಚಾರ ಮಾಡಲಿದ್ದಾರೆ. 

ರಾಜ್ಯದಲ್ಲಿ ಲಾಕ್ಡೌನ್‌ ಇಲ್ಲ, ಜನತಾ ಕರ್ಫ್ಯೂ ವಿಸ್ತರಣೆ ಸಾಧ್ಯತೆ: ಸುಧಾಕರ್‌! ..

ಈ ವಿಷಯವನ್ನು ಈಗಾಗಲೇ ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದೆ. ಚಿಕಿತ್ಸೆಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 

ಮನೆಯಲ್ಲಿ ಪ್ರತ್ಯೇಕವಾಗಿ ಇರಲು ಸಾಧ್ಯವಿಲ್ಲದವರಿಗೆ ಖಾಸಗಿ ಹೋಟೆಲ್‌ನಲ್ಲಿ ಐಸೋಲೇಶನ್‌ಗೆ ವ್ಯವಸ್ಥೆ ಕಲ್ಪಿಸಲು ಟಿವಿಯ ವರದಿಗಾರೊಬ್ಬರು ಮುಂದಾಗಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios