ಹಾವೇರಿ: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ, ದೇವರ ದರ್ಶನ ಪಡೆದು ಬಂದು ಮಸಣ ಸೇರಿದ 13 ಮಂದಿ..!

ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. 

12 Killed in Road Accident at Byadagi in Haveri grg

ಹಾವೇರಿ(ಜೂ.28): ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ. 

ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ 

ಫುಟ್‌ಪಾತ್‌ ಏರಿ ಅಂಗಡಿಗೆ ನುಗ್ಗಿದ ಪಿಕಪ್‌ ವಾಹನ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ.  ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ಮಾಯಮ್ಮನ ದರ್ಶನ ಮಾಡಿಕೊಂದು ಸ್ವಗ್ರಾಮಕ್ಕೆ ವಾಪಾಸಾಗುವಾಗ ಈ ದುರ್ಘಟನೆ ಸಂಭವಿಸಿದೆ. ಟಿಟಿಯಲ್ಲಿ ಒಟ್ಟು  17 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. 4 ಮಂದಿ ಗಾಯಾಳುಗಳಿಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. 

ಇಂದು ಬೆಳಗಿನ ಜಾವ ಬ್ಯಾಡಗಿ ತಾಲೂಕಿನಲ್ಲಿ ರಸ್ತೆ ಅಪಘಾತವಾಗಿದೆ. ಟಿಟಿಯಲ್ಲಿ ಪ್ರಯಾಣಿಸುತ್ತಿದ್ದ 13 ಜನರು ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ಕು ಜನ ಗಾಯಾಳುಗಳು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಇಬ್ಬರು ಐಸಿಯುನಲ್ಲಿದ್ದರು, ಐಸಿಯುನಲ್ಲಿದ್ದ ಒಬ್ಬರನ್ನ ಹುಬ್ಬಳ್ಳಿಗೆ ಮತ್ತೊಬ್ಬರನ್ನ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕಳುಹಿಸಲಾಗಿದೆ. ಇನ್ನಿಬ್ಬರು ಗಾಯಾಳುಗಳನ್ನ ಅವರ ಸಂಬಂಧಿಕರು ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘಟನೆ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ರಘುನಂಧನಮೂರ್ತಿ ಹೇಳಿದ್ದಾರೆ. 

ಅಪಘಾತದ ಮಾಹಿತಿ ಪಡೆದ ಸಚಿವ ಶಿವಾನಂದ ಪಾಟೀಲ್ 

ಹಾವೇರಿ ಬಳಿ‌ ಭೀಕರ ಅಪಘಾತದಲ್ಲಿ 13 ಜನ ಮೃತಪಟ್ಟ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಪಡೆದಿದ್ದಾರೆ. ಪೊಲೀಸ್ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. 

ಹಾವೇರಿ ದುರಂತದ ಕಣ್ಣೀರ ಕತೆ, ವಾಹನ ಪೂಜೆ ಮಾಡಿಸಿ ಮರಳುವಾಗ ಭೀಕರ ಅಪಘಾತ!

ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಲಾಗುವುದು. ಪರಿಹಾರಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು‌ ನಿರ್ಧಾರ  ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಸದ್ಯ ದೆಹಲಿಯಲ್ಲಿದ್ದಾರೆ.  

ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರು ಪರಿಹಾರ ನೀಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಜೊತೆ ದೂರವಾಣಿ ಮೂಲಕ ಚರ್ಚೆ ಚರ್ಚೆ ನಡೆಸಲಿದ್ದಾರೆ. 
ಮೃತಪಟ್ಟವರ ವಿವರ: 
1) ಆದರ್ಶ(25) (ಟಿ.ಟಿ. ವಾಹನದ ಚಾಲಕ)
2) ಅರುಣಕುಮಾರ (32)
3) ನಾಗೇಶ್ವರ್‌ರಾವ್ (50)
4) ಭಾಗ್ಯಾಭಾಯಿ(45) 
5) ವಿಶಾಲಾಕ್ಷಿ (49)
6) ಸುಭದ್ರಾಬಾಯಿ(60)
7) ಅಂಜಲಿ (29)
8) ಮಂಜುಳಾಬಾಯಿ (60)
9) ಮಾನಸಾ(20)
10) ರೂಪಾಬಾಯಿ (35)
11) ಮಂಜುಳಾ(54) 
12) ಆರ್ಯ (05)
13) ನಂದನ(03


ಘಾಯಾಳುಗಳ ವಿವರ:
1) ಅನ್ನಪೂರ್ಣ (52)
2) ಅರ್ಪಿತಾ (17)
3)  ಪರಶುರಾಮ ತಂದೆ ಸಿದ್ದಪ್ಪ (48)

4) ಗೌತಮ್ (12 ) ಇವರನ್ನ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಸಿ.ಜೆ.ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

Latest Videos
Follow Us:
Download App:
  • android
  • ios