ಬೆಂಗಳೂರು: 3 ತಿಂಗಳಲ್ಲಿ 13 ಕಾಲರಾ ಕೇಸ್‌, ಸ್ಟ್ರೀಟ್‌ ಫುಡ್‌ ಮಾರಾಟ ಬಂದ್‌..!

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬಿಎಂಆರ್‌ಸಿಎಐ ವಿದ್ಯಾರ್ಥಿನಿಲಯದ ಇಬ್ಬರು ಮಾತ್ರವಲ್ಲದೆ ವಿದ್ಯಾರ್ಥಿನಿಯರಿಗೆ ಎಚ್.ಎಸ್.ಆರ್ ಬಡಾವಣೆಯ ಜಗದೀಶ್ ಎಂಬುವ ವರಿಗೂ ಕಾಲರಾ ದೃಢಪಟ್ಟಿದೆ. ಹೀಗಾಗಿ ಪ್ರಕರಣಗಳ ಸಂಖ್ಯೆ 10 ರಿಂದ 13ಕ್ಕೆ ಏರಿಕೆಯಾಗಿದೆ. ಇನ್ನು ಜನವರಿಯಲ್ಲಿ ರಾಮನಗರದಲ್ಲಿ ವರದಿಯಾದ ಪ್ರಕರಣ ಸೇರಿ ಪ್ರಸಕ್ತ ವರ್ಷ ರಾಜ್ಯದಲ್ಲಿ 14 ಪ್ರಕರಣ ವರದಿಯಾದಂತಾಗಿದೆ. 

13 Cholera Cases in 3 Months in Bengaluru grg

ಬೆಂಗಳೂರು(ಏ.09):  ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಕಾಲಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಲ್ಲಿ ಎಂಟು ಮಂದಿಗೆ ಕಾಲರಾ ದೃಢಪಟ್ಟಿದ್ದು, ಪ್ರಸಕ್ತ ವರ್ಷದಲ್ಲಿ ಬೆಂಗಳೂರು ನಗರದಲ್ಲೇ 13 ಮಂದಿಗೆ ಕಾಲಾರ ವರದಿಯಾಗಿದೆ. ಏಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ವರದಿಯಾದ ಎಂಟು ಪ್ರಕರಣದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಹಾಗೂ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಮಂದಿಗೆ ಸೋಂಕು ದೃಢಪಟ್ಟಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬಿಎಂಆರ್‌ಸಿಎಐ ವಿದ್ಯಾರ್ಥಿನಿಲಯದ ಇಬ್ಬರು ಮಾತ್ರವಲ್ಲದೆ ವಿದ್ಯಾರ್ಥಿನಿಯರಿಗೆ ಎಚ್.ಎಸ್.ಆರ್ ಬಡಾವಣೆಯ ಜಗದೀಶ್ ಎಂಬುವ ವರಿಗೂ ಕಾಲರಾ ದೃಢಪಟ್ಟಿದೆ. ಹೀಗಾಗಿ ಪ್ರಕರಣಗಳ ಸಂಖ್ಯೆ 10 ರಿಂದ 13ಕ್ಕೆ ಏರಿಕೆಯಾಗಿದೆ. ಇನ್ನು ಜನವರಿಯಲ್ಲಿ ರಾಮನಗರದಲ್ಲಿ ವರದಿಯಾದ ಪ್ರಕರಣ ಸೇರಿ ಪ್ರಸಕ್ತ ವರ್ಷ ರಾಜ್ಯದಲ್ಲಿ 14 ಪ್ರಕರಣ ವರದಿಯಾದಂತಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 

ಬೆಂಗಳೂರಿನಲ್ಲಿ ಕಾಲರಾ ಸ್ಫೋಟ ಭೀತಿ: ಇಬ್ಬರು ವಿದ್ಯಾರ್ಥಿನಿಯರಲ್ಲಿ ಸೋಂಕು ದೃಢ

ವಿಕ್ಟೋರಿಯಾದಲ್ಲಿ ಮತ್ತೊಂದು ಕಾಲರಾ: ಬಿಎಂಆರ್‌ಸಿಐ ಕಾಲೇಜಿನಲ್ಲಿ ಇಬ್ಬರಿಗೆ ಕಾಲರಾ ದೃಢಪಟ್ಟಿತ್ತು. ಇದಲ್ಲದೆ ಏ.4 ರಂದು ಆಸ್ಪತ್ರೆಗೆ ದಾಖಲಾಗಿದ್ದ ಎಚ್‌.ಎಸ್‌ಆರ್ ಬಡಾವಣೆ ನಿವಾಸಿ ಜಗದೀಶ್ ಎಂಬುವವರಿಗೆ ಏ.6 ರಂದು ಸ್ಕೂಲ್ ಕಲ್ಟರ್‌ನಲ್ಲಿ ದೃಢಪಟ್ಟಿದೆ. ಸೋಂಕು ತನ್ಮೂಲಕ ವಿಕ್ಟೋರಿಯಾದಲ್ಲಿ ಪ್ರಸಕ್ತ ವಾರದಲ್ಲಿ ಕಾಲರಾ ದೃಢಪಟ್ಟ ಪ್ರಕರಣಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಉಳಿದ ಎರಡು ಪ್ರಕರಣ ಎಲ್ಲಿಂದ ವರದಿಯಾಗಿದೆ ಎಂಬುದನ್ನು ಅಧಿಕಾರಿಗಳು

ವಿಕ್ಟೋರಿಯದಲ್ಲಿನ ಡಿಸ್ಟಾಜರ್: ಅಸ್ವಸ್ಥರು

ನಿರ್ಜಲೀಕರಣದಿಂದ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಹಾಸ್ಟೆಲ್‌ ಎಲ್ಲ 47 ವೈದ್ಯ ವಿದ್ಯಾರ್ಥಿಗಳು ಸಹ ಆಸ್ಪತ್ರೆಯಿಂದ ಡಿಸ್ಟಾಜರ್ ಆಗಿದ್ದಾರೆ. ಇವರಲ್ಲಿ ಕೆಲವರಿಗೆ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಹಾಸ್ಟೆಲ್ ನ ಅಡುಗೆ ಮನೆ ಬಂದ್ ಮಾಡಲಾಗಿತ್ತು. ವಾರ್ಡನ್ ಅನ್ನು ಅಮಾನತು ಮಾಡಿ, ಅಡುಗೆ ತಯಾರಕರನ್ನು ಬದಲಿಸಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಡೀನ್ ಮತ್ತು ನಿರ್ದೇಶಕ ಡಾ. ರಮೇಶ್ ಕೃಷ್ಣ ಆದೇಶ ಹೊರಡಿಸಿದ್ದರು.

ಪ್ರಕರಣ ತಡವಾಗಿ ವರದಿಯಾಗಿವೆ: 

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವರದಿಯಾಗಿರುವ ಮೂರು ಪ್ರಕರಣದ ಬಗ್ಗೆ ಮಾತನಾಡಿರುವ ಬೆಂಗಳೂರು ನಗರ ಮುಖ್ಯ ಆರೋಗ್ಯಾಧಿಕಾರಿ ರವೀಂದ್ರನಾಥ್ ಎಂ. ಮೇಟಿ, ಈಸ್ಟ್ ಪಾಯಿಂಟ್ ವೈದ್ಯಕೀಯ ಕಾಲೇಜಿನಲ್ಲಿ ಮಾರ್ಚ್ ತಿಂಗಳಾಂತ್ಯದಲ್ಲಿ ಚಿಕಿತ್ಸೆ ಪಡೆದಿದ್ದ ಎರಡು ಪ್ರಕರಣ ಈಗ (ಏಪ್ರಿಲ್) ವರದಿ ನೀಡಿದ್ದಾರೆ. ಈ ಪೈಕಿ ಮೇಡಹಳ್ಳಿ ಹಾಗೂ ವೈಟ್ ಫೀಲ್ಡ್ ತಲಾ ಒಂದು ಪ್ರಕರಣ ವರದಿಯಾಗಿತ್ತು. ಮತ್ತೊಂದು ಪ್ರಕರಣ ಬೇರೆ ಕಡೆ ಆಗಿತ್ತು. ಮೂರು ಮಂದಿ ಗುಣಮುಖರಾಗಿದ್ದಾರೆ. ಈಗಾಗಲೇ ಒಂದಕ್ಕಿಂತ ಹೆಚ್ಚು ಪ್ರಕರಣ ಒಂದೇ ಕಡೆ ವರದಿಯಾದರೆ ಔಟ್ ಬ್ರೇಕ್ ಎಂದು ಪರಿಗಣಿಸಲಾಗುತ್ತದೆ. ಅಂತಹ ಪ್ರಕರಣಗಳು ವರದಿಯಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಲುಷಿತ ನೀರು ಪೂರೈಕೆ ಕಾಲರಾ ಹೆಚ್ಚಲು ಕಾರಣ

ಬೇಸಿಗೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದ್ದು, ಕೆಲವೆಡೆ ಕಲುಷಿತ ನೀರು ಪೂರೈಕೆಯಾಗುತ್ತಿದೆ. ಸುಮಾರು ದಿನಗಳಿಂದ ವಾಂತಿ-ಭೇದಿ ಪ್ರಕರಣಗಳು ಹೆಚ್ಚಾಗಿದ್ದು, ಇದರೊಂದಿಗೆ ಕಾಲರಾ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗಿದೆ. ಹೀಗಾಗಿ ನಗರದ ಜನರಲ್ಲಿ ಆತಂಕ ಹೆಚ್ಚಾಗಿದೆ.

ಹಾಸ್ಟೆಲ್‌ನಲ್ಲಿ ಆರ್‌ಒ ನೀರಿನ ಘಟಕ ಸ್ಥಾಪನೆ

ಪ್ರಕರಣಗಳ ಹಿನ್ನೆಲೆಯಲ್ಲಿ ಕೆಲ ವಿದ್ಯಾರ್ಥಿಗಳು ಹಾಸ್ಟೆಲ್ ತೊರೆದಿದ್ದಾರೆ. ಉಳಿದವರಿಗೆ ವಿಕ್ಟೋರಿಯಾ ಆಸ್ಪತ್ರೆಯ ಆಡುಗೆ ಮನೆಯಿಂದ ಊಟ ಮತ್ತು ನೀರು ಸರಬರಾಜು ಮಾಡಲಾಗುತ್ತಿದೆ. ಕೊನೆಗೂ ಎಚ್ಚೆತ್ತ ಅಧಿಕಾರಿ ವರ್ಗ, ಮುಚ್ಚಲಾಗಿದ್ದ ಹಾಸ್ಟೆಲ್ ಅಡುಗೆ ಮನೆಯ ಸ್ವಚ್ಛತಾ ಕಾರ್ಯ ಕೈಗೊಂಡಿದೆ. ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛಗೊಳಿ ಸಲಾಗಿದೆ. ಜೊತೆಗೆ ಹೆಚ್ಚುವರಿಯಾಗು ಮೂರು ಆರ್.ಒ ವಾಟರ್ ಪ್ಲಾಂಟ್‌ಗಳನ್ನು ಆಳವಡಿಸಲಾಗಿದೆ.

ಬೀದಿ ಬದಿ ಆಹಾರ ಮಾರಾಟಕ್ಕೆ ನಿರ್ಬಂಧ 

ರಾಜಧಾನಿ ಬೆಂಗಳೂರಿನಲ್ಲಿ ಕಾಲರಾ ರೋಗ ಪತ್ತೆಯಾದ ಹಿನ್ನೆಲೆಯಲ್ಲಿ ರಸ್ತೆ ಬದಿ ಕತ್ತರಿಸಿದ ಹಣ್ಣು ಮಾರಾಟ ಹಾಗೂ ತೆರೆದಿಟ್ಟ ಆಹಾರ ಮಾರಾಟವನ್ನು ನಿರ್ಬಂಧಿಸಿ ಬಿಬಿಎಂಪಿ ಸೋಮವಾರ ಅದೇಶಿಸಿದೆ.
ನಗರದ ಎಂಟು ವಲಯದಲ್ಲಿ ರಸ್ತೆ ಬದಿಗಳಲ್ಲಿ ಕತ್ತರಿಸಿದ ಹಣ್ಣು ಮತ್ತು ತೆರೆದಿಟ್ಟ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ಗಮನಿಸಬೇಕೆಂದು ಆರೋಗ್ಯ ಅಧಿಕಾರಿಗಳಿಗೆ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನಗರದಲ್ಲಿ ಕಾಲರಾ ಕಾಣಿಸಿಕೊಳ್ಳುತ್ತಿರುವುದರಿಂದ ಆಯಾ ವಲಯದ ಆರೋಗ್ಯ ಪರಿವೀಕ್ಷಕರು ಹೋಟೆಲ್, ಅಂಗಡಿಗಳನ್ನು ತಪಾಸಣೆ ಮಾಡಬೇಕು. ನೀರಿನ ಗುಣಮಟ್ಟದ ಬಗ್ಗೆ ಪರಿಶೀಲನೆ ಮಾಡಬೇಕು. ಹೋಟೆಲ್ ಗಳಲ್ಲಿ ಬಿಸಿ ನೀರಿನ ವ್ಯವಸ್ಥೆ ಜತೆಗೆ ಸ್ವಚ್ಛವಾಗಿಟ್ಟುಕೊಳ್ಳುವಂತೆ ಹೋಟೆಲ್ ಮಾಲೀಕರಿಗೆ ಸೂಚಿಸಬೇಕು.

ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಕಾಲರಾ ಪ್ರಕರಣ ಹೆಚ್ಚಳ, ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 49ಕ್ಕೆ ಏರಿಕೆ!

ಸಾಂಕ್ರಾಮಿಕ ರೋಗಗಳ ಕುರಿತಂತ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಸಾರ್ವಜನಿಕರಲ್ಲಿ ಅರಿವ ಮೂಡಿಸಬೇಕು. ಅದರಲ್ಲೂ ಸಾಂಕ್ರಾಮಿಕ ರೋಗಗಳ ವಿಷಯದ ವೈದ್ಯರು ಈ ವಿಷಯದಲ್ಲಿ ಹೆಚ್ಚು ಗಮನಹರಿಸಬೇಕು. ಕುಡಿಯುವ ನೀರಿನಿಂದ ಬರುತ್ತಿರುವುದರಿಂದ ಕುಡಿಯುವ ನೀರಿನ ಮೂಲಗಳಿಂದ ಕಾಲ ಕಾಲಕ್ಕೆ ನೀರಿನ ಮಾದರಿ ಪರೀಕ್ಷೆಗೆ ಒಳಪಡಿಸಿ ನೀರು ಕುಡಿಯಲು ಯೋಗ್ಯವೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ತಮ್ಮ ವ್ಯಾಪ್ತಿಗೆ ಬರುವ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಂದ ಸಾಂಕ್ರಾಮಿಕ ರೋಗಗಳಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವವರ ಹಾಗೂ ಪಡೆದವರ ವಿವರವನ್ನು ಪಡೆದುಕೊಳ್ಳಬೇಕು. ವರದಿಯನ್ನು ಐಎಚ್‌ಐಪಿ ತಂತ್ರಾಂಶದಲ್ಲಿ ನಮೂದಿಸುವಂತೆ ಸೂಚಿಸಲಾಗಿದೆ.

ಪ್ರಾತಿನಿಧಿಕ ಚಿತ್ರ

ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ನಮ್ಮ ಕ್ಲಿನಿಕ್, ಹರಿಗೆ ಆಸತ್ರೆ, ರೆಫರಲ್ ಆಸ್ಪತ್ರೆಗಳಲ್ಲಿ ಲಭ್ಯವಿರುವಂತೆ ಕ್ರಮವಹಿಸಬೇಕು. ಅಗತ್ಯ ಇದ್ದಲ್ಲಿ ಪಾಲಿಕೆ ಅನುದಾನದಿಂದ ಔಷಧಿಗಳನ್ನು ಖರೀದಿಸುವಂತೆ ತಿಳಿಸಲಾಗಿದೆ.
ಸಾಂಕ್ರಾಮಿಕ ರೋಗಗಳನ್ನು ತಡೆಯಲು ಓಆರ್‌ಎಸ್ ಮತ್ತು ಹಾಲೋಜಿನ್ ಮಾತ್ರೆಗಳನ್ನು ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತೆಯರು, ಆತಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗೆ ತಲುಪಿಸಬೇಕು. ಯಾವುದಾದರೂ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಕಾಣಿಸಿಕೊಂಡಲ್ಲಿ ತಕ್ಷಣ ಆರೋಗ್ಯ ವಿಭಾಗದ ಕ್ಷಿಪ್ರ ಪ್ರಕ್ರಿಯಾ ತಂಡವನ್ನು ಆ ಪ್ರದೇಶಕ್ಕೆ ಕಳುಹಿಸಬೇಕು. ಅಗತ್ಯ ಔಷಧಿಗಳನ್ನು ತೆಗೆದುಕೊಂಡು ಹೋಗಿ ಆ ಪ್ರದೇಶದಲ್ಲಿ ಚಿಕಿತ್ಸಾ ಶಿಬಿರವನ್ನು ತೆರೆದು ರೋಗ ಸಂಪೂರ್ಣವಾಗಿ ಗುಣಮುಖವಾಗುವವರೆಗೆ ಶಿಬಿರ ಇರುವಂತೆ ನೋಡಿಕೊಳ್ಳಬೇಕು. ಗಂಭೀರ ಸ್ವರೂಪದ ರೋಗಿಯನ್ನು ತ್ವರಿತವಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಲಾಗಿದೆ.
ಸಾಂಕ್ರಾಮಿಕ ರೋಗಗಳನ್ನು ತಡೆಯಲು ಓಆರ್‌ಎಸ್ ಮತ್ತು ಹಾಲೋಜಿನ್ ಮಾತ್ರೆಗಳನ್ನು ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತೆಯರು, ಆತಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗೆ ತಲುಪಿಸಬೇಕು. ಯಾವುದಾದರೂ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಕಾಣಿಸಿಕೊಂಡಲ್ಲಿ ತಕ್ಷಣ ಆರೋಗ್ಯ ವಿಭಾಗದ ಕ್ಷಿಪ್ರ ಪ್ರಕ್ರಿಯಾ ತಂಡವನ್ನು ಆ ಪ್ರದೇಶಕ್ಕೆ ಕಳುಹಿಸಬೇಕು. ಅಗತ್ಯ ಔಷಧಿಗಳನ್ನು ತೆಗೆದುಕೊಂಡು ಹೋಗಿ ಆ ಪ್ರದೇಶದಲ್ಲಿ ಚಿಕಿತ್ಸಾ ಶಿಬಿರವನ್ನು ತೆರೆದು ರೋಗ ಸಂಪೂರ್ಣವಾಗಿ ಗುಣಮುಖವಾಗುವವರೆಗೆ ಶಿಬಿರ ಇರುವಂತೆ ನೋಡಿಕೊಳ್ಳಬೇಕು. ಗಂಭೀರ ಸ್ವರೂಪದ ರೋಗಿಯನ್ನು ತ್ವರಿತವಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಲಾಗಿದೆ.

Latest Videos
Follow Us:
Download App:
  • android
  • ios