ಬೆಂಗಳೂರು(ಅ.18): ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 14 ಮಂದಿ ಮೃತಪಟ್ಟ ವರದಿಯಾಗಿದ್ದು, ಇದು ಅಕ್ಟೋಬರ್‌ ತಿಂಗಳಲ್ಲಿ ಒಂದು ದಿನದಲ್ಲಿ ದಾಖಲಾದ ಅತಿ ಕಡಿಮೆ ಸಾವಿನ ಸಂಖ್ಯೆಯಾಗಿದೆ. ನಗರದಲ್ಲಿ ಕೊರೋನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 3,500 ಏರಿಕೆಯಾಗಿದೆ.

"

ಶನಿವಾರ 3,371 ಹೊಸ ಕೊರೋನಾ ಸೋಂಕಿತರು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,04,005ಕ್ಕೆ ಏರಿಕೆಯಾಗಿದೆ. ಇದೇ ವೇಳೆ 4251 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 2,35,734ಕ್ಕೆ ಏರಿಕೆಯಾಗಿದೆ. ಸದ್ಯ 64,770 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 361 ಮಂದಿ ನಗರದ ವಿವಿಧ ಆಸ್ಪತ್ರೆಗಳ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನೆರೆ ಪ್ರವಾಹದೊಂದಿಗೆ ಕೊರೋನಾ ಅಬ್ಬರ, ಮತ್ತೆ 7 ಸಾವಿರ!

2361 ಮಂದಿಗೆ ದಂಡ:

ನಗರದಲ್ಲಿ ಶನಿವಾರ ಸಾಮಾಜಿಕ ಅಂತರ ಹಾಗೂ ಮಾಸ್ಕ್‌ ಧರಿಸುವ ನಿಯಮ ಉಲ್ಲಂಘಿಸಿದ 2,361 ಮಂದಿಗೆ ಬಿಬಿಎಂಪಿ ಮಾರ್ಷಲ್‌ಗಳು 5,90,250 ದಂಡ ವಿಧಿಸಿದ್ದಾರೆ. ಈ ಪೈಕಿ ಮಾಸ್ಕ್‌ ಧರಿಸದ 2185 ಮಂದಿಯಿಂದ 5,46,250, ಸಾಮಾಜಿಕ ಅಂತರ ನಿಯಮ ಉಲ್ಲಂಘಿಸಿದ 176 ಮಂದಿಯಿಂದ 44 ಸಾವಿರ ದಂಡ ವಸೂಲಿ ಮಾಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.