Asianet Suvarna News Asianet Suvarna News

ಶಿವಮೊಗ್ಗದಲ್ಲಿ ಮತ್ತೆ ಫೋಟೋ ಗಲಾಟೆ, ಲಾಠಿ ಚಾರ್ಜ್, 144 ಸೆಕ್ಷನ್ ಜಾರಿ

 ಅಮೃತ ಮಹೋತ್ಸವದ ಆಚರಣೆ ದಿನದಂದ ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಹಾಗೂ ಟಿಪ್ಪು ಸುಲ್ತಾನ್ ಭಾವಚಿತ್ರ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. 

144 imposed In Shivamogga City Over veer savarkar Photo Row rbj
Author
Bengaluru, First Published Aug 15, 2022, 3:49 PM IST

ಶಿವಮೊಗ್ಗ, (ಆಗಸ್ಟ್.15): 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ರಾಷ್ಟ್ರದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದ್ರೆ, ಶಿವಮೊಗ್ಗದಲ್ಲಿ ಅಮೃತ ಮಹೋತ್ಸವದ ಆಚರಣೆ ವೇಳೆ ಸಾವರ್ಕರ್ ಭಾವಚಿತ್ರ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ.

ವೀರ ಸಾವರ್ಕರ್ ಫೋಟೋ ಅಳವಡಿಕೆ ವಿವಾದ ತಾರಕ್ಕೇರುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದಾದ್ಯಂತ 144ಜಾರಿಗೊಳಿಸಲಾಗಿದೆ.

ಶಿವಮೊಗ್ಗದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಹಿಂದೂಪರ ಸಂಘಟನೆ ಕಾರ್ಯ ಕಾರ್ಯಕರ್ತರು ವೀರ ಸಾವರ್ಕರ್ ಭಾವಚಿತ್ರ ಹಾಕಿದ್ದಾರೆ. ಇದಕ್ಕೆ ವಿರೋಧವಾಗಿ ಮುಸ್ಲಿಂ ಸಮುದಾಯದವರು ಟಿಪ್ಪು ಭಾವಚಿತ್ರ ಹಾಕಿದ್ದಾರೆ.  ಅಲ್ಲದೇ ಹಿಂದೂ ಸಂಘಟನೆ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಪರಸ್ಪರ ಪರ-ವಿರೋಧದ ಘೋಷಣೆ ಕೂಗಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಲಾಠಿಚಾರ್ಜ್ ಮಾಡಿದರು.

ಶಿವಮೊಗ್ಗದಲ್ಲಿ ಮತ್ತೆ ಹೊತ್ತಿದ ಧರ್ಮದ ಕಿಚ್ಚು: ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್‌ ಹರಿದು ಉದ್ಧಟತನ

ಅಮೃತ ಮಹೋತ್ಸವ ಅಂಗವಾಗಿ ಮೊನ್ನೇ  ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಿತ್ತು.  ಈ ಪ್ರದರ್ಶ ವೇಳೆ ವೀರ ಸಾವರ್ಕರ್ ಫೋಟೋವನ್ನು ಸಹ ಇಡಿಸಲಾಗಿತ್ತು. ಆದ್ರೆ, ಇದಕ್ಕೆ ಮುಸ್ಲಿಂ ಮುಖಂಡನೊಬ್ಬ ವಿರೋಧಿಸಿ ಸಾರ್ವಕರ್ ಫೋಟೋ ತೆಗೆಸಿದ್ದರು. 

ಶಿವಮೊಗ್ಗದ ಶಿವಪ್ಪನಾಯಕ ಮಾಲ್‍ನಲ್ಲಿ ಗೊಂದಲ ಏರ್ಪಟ್ಟಿತ್ತು. ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಗರದ ಶಿವಪ್ಪನಾಯಕ ಮಾರುಕಟ್ಟೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಮಹಾತ್ಮ ಗಾಂಧೀಜಿ, ಜವಹರಲಾಲ್ ನೆಹರು, ಭಗತ್ ಸಿಂಗ್, ಸರ್ದಾರ್ ವಲ್ಲಭಬಾಯ್ ಪಟೇಲ್, ಚಂದ್ರಶೇಖರ್ ಆಜಾದ್, ಅಂಬೇಡ್ಕರ್, ಸುಭಾಷ್ ಚಂದ್ರಬೋಸ್, ವೀರ ಸಾವರ್ಕರ್ ಭಾವಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. ಮಾಲ್‍ನಲ್ಲಿ ಛಾಯಾಚಿತ್ರ ಪ್ರದರ್ಶನ ಗಮನಿಸಿದ ಎಸ್‍ಡಿಪಿಐ ಕಾರ್ಯಕರ್ತರು ರೊಚ್ಚಿಗೆದ್ದು, ಫೋಟೋ ತೆಗೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಅಲ್ಲದೇ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಹಾಕುವಂತೆ ಆಗ್ರಹಿಸಿದ್ದರು. ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಎಸ್‍ಡಿಪಿಐ ಕಾರ್ಯಕರ್ತರ ವಿರುದ್ದ ಪ್ರತಿಭಟನೆ ನಡೆಸಿದ್ದರು. ಸ್ವಾತಂತ್ರ್ಯ ಹೋರಾಟಗಾರರಿಗೆ ಎಸ್‍ಡಿಪಿಐ ಕಾರ್ಯಕರ್ತರು ಅವಮಾನ ಮಾಡಿದ್ದಾರೆ. ಕ್ರಮ ಕೈಗೊಳ್ಳುವಂತೆ ಆಕ್ರೋಶ ವ್ಯಕ್ತಪಡಿಸಿದರು

ಘಟನೆ ಬಳಿಕ ಎಚ್ಚೆತ್ತ ಮಾಲ್ ಸಿಬ್ಬಂದಿ ವೀರ ಸಾವರ್ಕರ್ ಭಾವಚಿತ್ರ ಮತ್ತೆ ಹಾಕುವುದರ ಜೊತೆಗೆ ಅಬ್ದುಲ್ ಕಲಾಂ ಅವರ ಭಾವಚಿತ್ರವನ್ನು ಅಳವಡಿಸಿದರು. ಅಲ್ಲದೇ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿಯಲ್ಲಿ ಕೆಲವು ಮುಸ್ಲಿಂ ಯುವಕರ ವಿರುದ್ದ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟಿನಲ್ಲಿ ಭಾವಚಿತ್ರದ ಗೊಂದಲ ಕೆಲಕಾಲ ಅಮೃತ ಮಹೋತ್ಸವದ ಸಂಭ್ರಮಕ್ಕೆ ಅಡ್ಡಿಯಾಗಿತ್ತು.

Follow Us:
Download App:
  • android
  • ios