Asianet Suvarna News Asianet Suvarna News

KRS ಜಲಾಶಯದ ಸುತ್ತ ಮುತ್ತ ನಿಷೇಧಾಜ್ಞೆ ಜಾರಿ

ಕಾವೇರಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಈ ನಿಟ್ಟಿನಲ್ಲಿ ಸುತ್ತಮುತ್ತಲ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ತಾಲೂಕು ದಂಡಾಧಿಕಾರಿ ಆದೇಶ ನೀಡಿದ್ದಾರೆ. 

144 Section Imposed Around KRS Dam Mandya
Author
Bengaluru, First Published Aug 22, 2019, 11:58 AM IST

ಮಂಡ್ಯ (ಆ.22]: ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಜಾಸ್ತಿಯಾಗಿದ್ದು ಇದರಿಂದ KRS ಜಲಾಶಯ ಸಂಪೂರ್ಣ ಭರ್ತಿಯಾಗಿದೆ. 

ಈ ನಿಟ್ಟಿನಲ್ಲಿ ಡ್ಯಾಂ ಸುತ್ತಮುತ್ತಲ ಪ್ರದೇಶಗಳಲ್ಲಿ ಯಾವುದೇ ಕಲ್ಲು ಗಣಿಗಾರಿಗೆ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ.  ಸೆ.4ರವರೆಗೂ ಕೂಡ ಗಣಿಗಾರಿಕೆ ನಿಷೇಧಿಸಲಾಗಿದೆ.

ಡ್ಯಾಂನ ಸುತ್ತಮುತ್ತಲ 20 ಕಿ.ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಪಾಂಡವಾಪುರ ತಾಲೂಕು  ತಹಶೀಲ್ದಾರ್ ಹಾಗೂ ದಂಡಾಧಿಕಾರಿ ಪ್ರಮೋದ್ ಎಲ್. ಪಾಟೀಲ್ ಆದೇಶ ನೀಡಿದ್ದಾರೆ. 

ಕನ್ನಂಬಾಡಿಯ ಭದ್ರತೆಗೆ ಆತಂಕ : ಬಿತ್ತು ಬೀಗ ಮುದ್ರೆ

ತಾಲೂಕಿನ ಬೇಬಿ ಬೆಟ್ಟದ ವ್ಯಾಪ್ತಿಯ ಚಿನಕುರಳೀ, ಹೊನಗಾನಹಳ್ಳಿ, ದೊಡ್ಡಬೋಗನಹಳ್ಳಿ, ಮೊಳೆಸಂದ್ರ, ಅಲ್ಪಳ್ಳಿ, ಕಟ್ಟೇರಿ, ಕಣಿವೆಕೊಪ್ಪಲು, ಚಂದ್ರೆ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಕಳೆದ ಕೆಲ ದಿನಗಳಿಂದ ಡ್ಯಾಂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಶಬ್ದ ಕೇಳುತಿತ್ತು. ಇದರಿಂದ ಅಲ್ಲಿನ ಜನರಲ್ಲಿ ಆತಂಕ ಎದುರಾಗಿತ್ತು. ಇದಕ್ಕೆ ಇಲ್ಲಿ ನಡೆಯುತ್ತಿರುವ ಗಣಿಗಾರಿಕೆ ಕಾರಣವೆಂದು ನಿಷೇಧಾಜ್ಞೆ ಹೇರಲಾಗಿದೆ.

Follow Us:
Download App:
  • android
  • ios