Tumakuru: ಶಿರಾ ಜಲಜೀವನ್ ಮಿಷನ್ ಯೋಜನೆಗೆ 150 ಕೋಟಿ: ಶಾಸಕ ರಾಜೇಶ್ ಗೌಡ
ತಾಲೂಕಿನಲ್ಲಿ ಮನೆ ಮನೆಗೂ ನೀರು ಕೊಡಬೇಕೆಂಬ ಉದ್ದೇಶದಿಂದ ಗ್ರಾಮೀಣ ನೀರು ಸರಬರಾಜು ಇಲಾಖೆಯಿಂದ ಅನುಷ್ಠಾನಗೊಂಡಿರುವ ಜಲಜೀವನ್ ಮಿಷನ್ ಯೋಜನೆಯು ತಾಲೂಕಿನಲ್ಲಿಯೂ ಅನುಷ್ಠಾನಗೊಳ್ಳಲಿದ್ದು, ಇದಕ್ಕಾಗಿ ಸರ್ಕಾರ ಸುಮಾರು 150 ಕೋಟಿ ರು.ಗಳ ಅನುದಾನ ವಿನಿಯೋಗಿಸಿದೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.
ಶಿರಾ (ಅ.16): ತಾಲೂಕಿನಲ್ಲಿ ಮನೆ ಮನೆಗೂ ನೀರು ಕೊಡಬೇಕೆಂಬ ಉದ್ದೇಶದಿಂದ ಗ್ರಾಮೀಣ ನೀರು ಸರಬರಾಜು ಇಲಾಖೆಯಿಂದ ಅನುಷ್ಠಾನಗೊಂಡಿರುವ ಜಲಜೀವನ್ ಮಿಷನ್ ಯೋಜನೆಯು ತಾಲೂಕಿನಲ್ಲಿಯೂ ಅನುಷ್ಠಾನಗೊಳ್ಳಲಿದ್ದು, ಇದಕ್ಕಾಗಿ ಸರ್ಕಾರ ಸುಮಾರು 150 ಕೋಟಿ ರು.ಗಳ ಅನುದಾನ ವಿನಿಯೋಗಿಸಿದೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.
ತಾಲೂಕಿನ ಹುಲಿಕುಂಟೆ ಹೋಬಳಿಯ ಯಾದಲಡಕು ಗ್ರಾಮದಲ್ಲಿ ಕಂದಾಯ ಇಲಾಖೆ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಸವಲತ್ತು ಅರ್ಹ ಫಲಾನುಭವಿಗೆ ಮನೆ ಬಾಗಿಲಿಗೆ ತಲುಪಿಸುವಂತಹ ಹಾಗೂ ರೈತ ಮತ್ತು ಜನಸಾಮಾನ್ಯರ ಸಮಸ್ಯೆಗೆ ನೇರವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮದ ಅಡಿಯಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ವಾಸ್ತವ್ಯ ಮಾಡಿ ಸಮಸ್ಯೆಯನ್ನು ಆಲಿಸಲು ಇಂತಹ ಜನಪರ ಕಾರ್ಯಕ್ರಮಗಳು ಹೆಚ್ಚು ಸಹಕಾರಿಯಾಗಿದೆ ಎಂದರು.
ತುಮಕೂರು : ಹತ್ತು ಹಲವಾರು ಸಮಸ್ಯೆಗೆ ಸ್ಥಳದಲ್ಲೇ ಡಿಸಿಪರಿಹಾರ
ಶಿರಾ ತಾಲೂಕಿನಲ್ಲಿರುವ ಎಲ್ಲಾ ನಿವೇಶನ ರಹಿತರಿಗೆ ನಿವೇಶನ ಕಲ್ಪಿಸಲು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಖುದ್ದು ಈ ಬಗ್ಗೆ ಕಾಳಜಿ ವಹಿಸಿ ಒಂದೇ ಮನೆಯಲ್ಲಿ ಎರಡು ಮೂರು ಕುಟುಂಬ ವಾಸ ಮಾಡುತ್ತಿರುವವರನ್ನು ಗುರುತಿಸಿ ಆಯ್ಕೆ ಮಾಡಲು ಕ್ರಮ ಕೈಗೊಳ್ಳಿ ಎಲ್ಲರಿಗೂ ನಿವೇಶನ ಸಿಗುವಂತಾಗಲಿ ಎಂದರು. ತಹಸೀಲ್ದಾರ್ ಮಮತಾ ಮಾತನಾಡಿ, ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಖುದ್ದು ಹಾಜರಿರುತ್ತಾರೆ. ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದು ಸದ್ಬಳಕೆ ಮಾಡಿಕೊಳ್ಳಿ ಎಂದರು.
ಕಾರ್ಯಕ್ರಮದಲ್ಲಿ 29 ರೈತರಿಗೆ ಸಾಗುವಳಿ ಚೀಟಿ ಹಾಗೂ 120 ಜನರಿಗೆ ಪಿಂಚಣಿ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು. ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನ್ನಪೂರ್ಣ, ಉಪಾಧ್ಯಕ್ಷೆ ಕೆ.ಲಕ್ಷ್ಮೇ, ತಾಪಂ ಕಾರ್ಯನಿರ್ವಹಣಾಧಿಕಾರಿ ಅನಂತರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ, ಸಹಾಯಕ ಕೃಷಿ ನಿರ್ದೇಶಕ ರಂಗನಾಥ್, ಲೋಕೋಪಯೋಗಿ ಎಇಇ ರವಿಕುಮಾರ್, ಮಂಜುಪ್ರಸಾದ್, ಆಹಾರ ಇಲಾಖೆಯ ನಾಗರಾಜು, ಪಶು ಸಹಾಯಕ ನಿರ್ದೇಶಕ ಡಾ.ರಮೇಶ್, ವಲಯ ಅರಣ್ಯ ಅಧಿಕಾರಿ ನವನೀತ್, ಗ್ರೇಡ್ 2 ತಹಸೀಲ್ದಾರ್ ಮಂಜುನಾಥ್, ಹುಲಿಕುಂಟೆ ಕಂದಾಯ ವೃತ್ತ ನಿರೀಕ್ಷಕ ಹೊನ್ನಪ್ಪ ಸೇರಿದಂತೆ ಹಲವರು ಹಾಜರಿದ್ದರು.
Tumakuru: ರೈತರು ಆದಾಯ ದುಪ್ಪಟ್ಟು ಹೆಚ್ಚಿಸಿಕೊಳ್ಳಬೇಕು: ಸಂಸದ ಜಿ.ಎಸ್.ಬಸವರಾಜು
ಸಮಸ್ಯೆಗೆ ಕೂಡಲೇ ಸ್ಪಂದಿಸಿ ಪರಿಹಾರ ದೊರಕಿಸಿ: ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಮಾತನಾಡಿ, ಗ್ರಾಮ ವಾಸ್ತವ್ಯ ಒಂದು ಅರ್ಥಪೂರ್ಣ ಕಾರ್ಯಕ್ರಮವಾಗಿದ್ದು, ಸರ್ಕಾರದ ಹಲವಾರು ಜನಪರ ಕಾರ್ಯಕ್ರಮಗಳಲ್ಲಿ ಇದು ಒಂದು ಮುಖ್ಯವಾದದ್ದಾಗಿದೆ. ಕಂದಾಯ ಸಚಿವರಾದ ಆರ್.ಅಶೋಕ್ ಅವರು ದೂರದೃಷ್ಟಿಯೊಂದಿಗೆ ಈ ಕಾರ್ಯಕ್ರಮ ರೂಪಿಸಿದ್ದು ಗ್ರಾಮಸ್ಥರಿಗೆ ತಮ್ಮ ಹಳ್ಳಿಗಳಲ್ಲೇ ಹಲವಾರು ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರಕುವಂತೆ ಆಗಿದೆ. ಈ ಕಾರ್ಯಕ್ರಮದಿಂದ ನಿತ್ಯ ದೂರದ ಊರುಗಳಿಂದ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಕೇಂದ್ರಕ್ಕೆ ಅಲೆಯುವುದು ತಪ್ಪತ್ತದೆ. ಎಲ್ಲಾ ಇಲಾಖೆ ಅಧಿಕಾರಿಗಳು ಹಾಜರಿದ್ದು, ರೈತರ ಹಾಗೂ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ ಪರಿಹಾರ ದೊರಕಿಸಿಕೊಡಬೇಕು ಎಂದರು.