ಉಡುಪಿಯಲ್ಲಿ 1547 ಮಂದಿ ಹೋಂ ಕ್ವಾರಂಟೈನ್ ಉಲ್ಲಂಘನೆ

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 1547 ಮಂದಿ ಹೋಂ ಕ್ವಾರಂಟೈನ್‌ ಉಲ್ಲಂಘಿಸಿದ್ದು, ಅದರಲ್ಲಿ 1236 ಮಂದಿಗೆ ಎಚ್ಚರಿಕೆ ನೀಡಲಾಗಿದೆ. 8 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್‌ ಹೇಳಿದ್ದಾರೆ.

1547 people break quarantine in udupi

ಉಡುಪಿ(ಝೂ.05): ಜಿಲ್ಲೆಯಲ್ಲಿ ಇದುವರೆಗೆ 1547 ಮಂದಿ ಹೋಂ ಕ್ವಾರಂಟೈನ್‌ ಉಲ್ಲಂಘಿಸಿದ್ದು, ಅದರಲ್ಲಿ 1236 ಮಂದಿಗೆ ಎಚ್ಚರಿಕೆ ನೀಡಲಾಗಿದೆ. 8 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್‌ ಹೇಳಿದ್ದಾರೆ. ಅವರು ಶನಿವಾರ ಕೊರೋನಾ ಫ್ಲೈಯಿಂಗ್‌ ಸ್ಕಾ$್ವಡ್‌ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಹಲವು ಮಂದಿ ಒಂದು ಬಾರಿಗಿಂತಲೂ ಹೆಚ್ಚು ಹೋಂ ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ್ದು, ಅಂಥವರ ವಿರುದ್ಧ ಇದುವರೆಗೂ ಪ್ರಕರಣ ದಾಖಲಿಸದ ಕುರಿತು ಅಧಿಕಾರಿಗಳ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಕೂಡಲೇ ಪ್ರಕರಣ ದಾಖಲಿಸಿ ವರದಿ ನೀಡುಬೇಕು, ಇಲ್ಲವಾದಲ್ಲಿ ಸಂಬಂಧಪಟ್ಟಅಧಿಕಾರಿಗಳ ಮೇಲೆಯೇ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಿಂದ ಜನರ ಗುಳೆ: ಮನೆ ಖಾಲಿ ಮಾಡಿ ತಮ್ಮ ಊರಿಗೆ ಪ್ರಯಾಣ!

ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಪೂರಕ ವಾತಾವರಣವಿದೆ. ಆದರೆ ಜಿಲ್ಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅನೇಕ ಸನ್ಮಾನ ಕಾರ್ಯಕ್ರಮಗಳು, ಸಮಾರಂಭಗಳು ನಡೆಯುತ್ತಿದ್ದು, ಅಂಥವರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿದರು.

ದಕ್ಷಿಣ ಕನ್ನಡದಲ್ಲಿ ಮತ್ತೆ ಮೂವರು ಬಲಿ, ಬಿಜೆಪಿ ಮುಖಂಡ ಸೇರಿ 75 ಪಾಸಿಟಿವ್‌

ಬಸ್‌ಗಳಲ್ಲಿ ಸಾಮಾಜಿಕ ಅಂತರ ಪಾಲನೆಯಾಗದಿರುವ ಬಗ್ಗೆ ತಹಸೀಲ್ದಾರ್‌ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ವರದಿ ನೀಡುವಂತೆ ಸೂಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿ.ಪಂ. ಉಪಕಾರ್ಯದರ್ಶಿ ಕಿರಣ್‌ ಫೆಡ್ನೇಕರ್‌ ಹಾಗೂ ಎಲ್ಲ ತಹಸೀಲ್ದಾರರು ಹಾಗೂ ಫ್ಲೈಯಿಂಗ್‌ ಸ್ಕಾ$್ವಡ್‌ ಅಧಿಕಾರಿಗಳು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios