ಕಾರವಾರ [ಜ.19]:  ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಜಾನುವಾರ ಸಾಗಾಟ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. 

ಕಾರವಾರ ತಾಲೂಕಿನ ಕಡವಾಡ ಗ್ರಾಮದಿಂದ ಹಸುಗಳನ್ನು ಸಾಗಿಸುತ್ತಿದ್ದ ವೇಳೆ ಅಧಿಕೃತ ಮಾಹಿತಿ ಆಧರಿಸಿ ದಾಳಿ ಮಾಡಲಾಗಿದೆ. 

ವಾಹನದಲ್ಲಿ ಹಸುಗಳನ್ನು ಸಾಗಿಸುತ್ತಿದ್ದ ವೇಳೆ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. 

ಮೇದಿನಿ ಎಂಬ ಸುಂದರ ಊರಲ್ಲಿ 2ಹಗಲು 1ರಾತ್ರಿ : ಇಲ್ಲಿ ಜೀವಕ್ಕೆ ಗ್ಯಾರಂಟಿ ಇಲ್ಲ!...

ವಾಹನದಲ್ಲಿ ಹಲವು ಜಾನುವಾರುಗಳನ್ನು ರಕ್ಷಿಸಿದ್ದು, ಈ ಸಂಬಂಧ ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.