ಚಾಮರಾಜನಗರ: ಮಾದಪ್ಪನ ಹುಂಡಿಯಲ್ಲಿ 2 ಕೋಟಿ ರೂ. ಸಂಗ್ರಹ

ರಾಜ್ಯ ಸರ್ಕಾರದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭೇಟಿ ನೀಡಿದ್ದಾರೆ. ಜತೆಗೆ ಹುಣ್ಣಿಮೆ, ಅಮಾವಾಸ್ಯೆ ಹಾಗೂ ಸರ್ಕಾರಿ ರಜೆ ದಿನಗಳು, ದೀಪಾವಳಿ ಜಾತ್ರಾ ಮಹೋತ್ಸವ ಕಾರ್ತಿಕ ಸೋಮವಾರ ಹಿನ್ನೆಲೆ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

2 Crore Rs Collection at Male Mahadevadeshwara Hill in Chamarajanagara grg

ಹನೂರು(ಡಿ.03):  ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 23 ದಿನಗಳ ಅವಧಿಯಲ್ಲಿ 2 ಕೋಟಿ ರು. ಸಂಗ್ರಹವಾಗಿದೆ. ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆಯವರೆಗೂ ನಡೆಯಿತು.

ರಾಜ್ಯ ಸರ್ಕಾರದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭೇಟಿ ನೀಡಿದ್ದಾರೆ. ಜತೆಗೆ ಹುಣ್ಣಿಮೆ, ಅಮಾವಾಸ್ಯೆ ಹಾಗೂ ಸರ್ಕಾರಿ ರಜೆ ದಿನಗಳು, ದೀಪಾವಳಿ ಜಾತ್ರಾ ಮಹೋತ್ಸವ ಕಾರ್ತಿಕ ಸೋಮವಾರ ಹಿನ್ನೆಲೆ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲೂ ಈಗ ವನ್ಯಜೀವಿ ಸಫಾರಿ ಆರಂಭ! ಬುಕಿಂಗ್ ಹೇಗೆ? ಫೀ ಎಷ್ಟು? ಇಲ್ಲಿದೆ ಮಾಹಿತಿ

ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 2,00,41,724 ರು. ಸಂಗ್ರಹವಾಗಿದೆ. ಕಳೆದ ತಿಂಗಳು ಚಿನ್ನದ ಮೌಲ್ಯಮಾಪಕರಿಗೆ ಅನಾರೋಗ್ಯ ಇದ್ದ ಹಿನ್ನೆಲೆ ಈಗ ಮೌಲ್ಯಮಾಪನ ಮಾಡಲಾಗಿದೆ. ಕಳೆದ ತಿಂಗಳು ಚಿನ್ನ 24 ಗ್ರಾಂ, ಬೆಳ್ಳಿ ಒಂದು ಕೆಜಿ 915 ಗ್ರಾಂ ಸಂಗ್ರಹವಾಗಿದೆ. ಈ ಬಾರಿ ಚಿನ್ನ 76 ಗ್ರಾಂ ಮತ್ತು ಬೆಳ್ಳಿ ಒಂದು ಕೆಜಿ 514 ಗ್ರಾಂ ಸಂಗ್ರಹವಾಗಿದೆ.

ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕ ಅಧೀಕ್ಷಕ ನಾಗೇಶ್, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

Latest Videos
Follow Us:
Download App:
  • android
  • ios