ಬಸ್ ಹಾಗೂ ಲಾರಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಲಾರಿ ಹಾಗೂ ಬಸ್ ಡಿಕ್ಕಿಯಾಗಿ ಎರಡೂ ವಾಹನಗಳು ಹಳ್ಳಕ್ಕೆ ಉರುಳಿವೆ.
ತುಮಕೂರು(ಮಾ.01): ಬಸ್ ಹಾಗೂ ಲಾರಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಲಾರಿ ಹಾಗೂ ಬಸ್ ಡಿಕ್ಕಿಯಾಗಿ ಎರಡೂ ವಾಹನಗಳು ಹಳ್ಳಕ್ಕೆ ಉರುಳಿವೆ. ಘಟನೆಯಲ್ಲಿ 10 ಜನ ಗಾಯಗೊಂಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಲಾರಿ -ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಶಿರಾ ತಾಲೂಕಿನ ಉಜ್ಜನಕುಂಟೆ ಬಳಿ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿದ್ದ ಪವನ್ ಹಾಗೂ ರಮೇಶ್ ಮೃತರು.
ಪೌರ ಕಾರ್ಮಿಕರಿಲ್ಲ: ಪತಿ, ಮಕ್ಕಳೊಂದಿಗೆ ಕಸ ಗುಡಿಸಿದ ಕಾರ್ಪೊರೇಟರ್..!
ಲಾರಿ ಹಾಗೂ ಖಾಸಗಿ ಬಸ್ ಡಿಕ್ಕಿಯಾದ ರಭಸಕ್ಕೆ ಹಳ್ಳಕ್ಕೆ ಉರುಳಿದೆ. ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರಿಗೆ ಶಿರಾ ಹಾಗೂ ತುಮಕೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
