ಚಾಮರಾಜನಗರದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಹಾಮಾರಿ ಕೊರೋನಾ ಸೋಂಕು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಆದರ್ಶ ಶಾಲೆಯ ವಿದ್ಯಾರ್ಥಿಗಳಿಬ್ಬರಲ್ಲಿ ಪಾಸಿಟಿವ್

ಚಾಮರಾಜನಗರ (ಸೆ.19): ಚಾಮರಾಜನಗರದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಹಾಮಾರಿ ಕೊರೋನಾ ಸೋಂಕು ತಗುಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಆದರ್ಶ ಶಾಲೆಯ ವಿದ್ಯಾರ್ಥಿಗಳಿಬ್ಬರಲ್ಲಿ ಪಾಸಿಟಿವ್ ಬಂದಿದೆ. ಕಳೆದ ಮೂರು ದಿನಗಳ ಹಿಂದೆ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಮಾಡಿದ್ದು ಈ ವೇಳೆ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಶಾಲೆಯ ಎಲ್ಲಾ‌ ವಿದ್ಯಾರ್ಥಿಗಳ ಗಂಟಲು ದ್ರವ ಸಂಗ್ರಹ ಮಾಡಿದ್ದು, ವರದಿಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ. ಮುನ್ನೆಚ್ವರಿಕೆ ಕ್ರಮವಾಗಿ ಕೆಲ ದಿನ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.

ದೇಶದಲ್ಲಿ ಶೇ.70 ರಷ್ಟು ಕೋವಿಡ್ ಲಸಿಕೀಕರಣ ಕಂಪ್ಲೀಟ್ : ಜೋಷಿ

ಆದರ್ಶ ಶಾಲೆಯಲ್ಲಿ 6 ರಿಂದ 10ನೇ ತರಗತಿವರೆಗೆ ಪಾಳಿ ಪದ್ಧತಿಯಲ್ಲಿ ಪಾಠಗಳು ನಡೆಯುತ್ತಿದ್ದು, ಒಟ್ಟು‌ 398 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಶಾಲೆಯ ಆವರಣ ಮತ್ತು ಕೊಠಡಿಗಳಿಗೆ ಮುನ್ನಚ್ಚರಿಕೆ ಕ್ರಮವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಶಾಲೆಯಲ್ಲಿ ಹೆಚ್ಚಿದ ಆತಂಕ ಹೆಚ್ಚಾಗಿದೆ.