ಹಾವೇರಿ(ಫೆ.06): ಬಾಲಕಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಇಲ್ಲಿಯ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್‌ ಕಿಣಿ ತೀರ್ಪು ಪ್ರಕಟಿಸಿದ್ದಾರೆ. 

ಜಿಲ್ಲೆಯ ರಾಣಿಬೆನ್ನೂರಿನ ಅನಿಲ ತಂದೆ ಶ್ರೀನಿವಾಸ ನಾಯಕ ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. ರಾಣಿಬೆನ್ನೂರು ನಗರದ 26 ವರ್ಷದ ಅನಿಲ ಎಂಬಾತ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಕುರಿತಂತೆ 2014ರಲ್ಲಿ ರಾಣಿಬೆನ್ನೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಸರ್ಕಾರಿ ಅಭಿಯೋಜಕರಾದ ಸಿದ್ಧಾರೂಡ ಎಂ ಗೆಜ್ಜಿಹಳ್ಳಿ ಅವರು ವಾದ ಮಂಡಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.