Asianet Suvarna News Asianet Suvarna News

ಬಾಲಕಿ ಮೇಲೆ ಕಾಮಕೃಷೆ ತೀರಿಸಿಕೊಂಡ ಕಾಮುಕನಿಗೆ 20 ವರ್ಷ ಜೈಲು

ಬಾಲಕಿಗೆ ಲೈಂಗಿಕ ದೌರ್ಜನ್ಯ| ಆರೋಪಿಗೆ 20 ವರ್ಷ ಜೈಲು ಶಿಕ್ಷೆ| ಅನಿಲ ಎಂಬಾತ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ| ಈ ಸಂಬಂಧ ರಾಣಿಬೆನ್ನೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು|

20 Years Imprisonment to  accused for Rape Case in Haveri
Author
Bengaluru, First Published Feb 6, 2020, 7:52 AM IST

ಹಾವೇರಿ(ಫೆ.06): ಬಾಲಕಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಇಲ್ಲಿಯ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್‌ ಕಿಣಿ ತೀರ್ಪು ಪ್ರಕಟಿಸಿದ್ದಾರೆ. 

ಜಿಲ್ಲೆಯ ರಾಣಿಬೆನ್ನೂರಿನ ಅನಿಲ ತಂದೆ ಶ್ರೀನಿವಾಸ ನಾಯಕ ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. ರಾಣಿಬೆನ್ನೂರು ನಗರದ 26 ವರ್ಷದ ಅನಿಲ ಎಂಬಾತ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಕುರಿತಂತೆ 2014ರಲ್ಲಿ ರಾಣಿಬೆನ್ನೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಸರ್ಕಾರಿ ಅಭಿಯೋಜಕರಾದ ಸಿದ್ಧಾರೂಡ ಎಂ ಗೆಜ್ಜಿಹಳ್ಳಿ ಅವರು ವಾದ ಮಂಡಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

Follow Us:
Download App:
  • android
  • ios