ದಾವಣಗೆರೆ ಜಿಲ್ಲೆಯಲ್ಲಿ 20,927 ವಿದ್ಯಾರ್ಥಿಗಳು SSLC ಪರೀಕ್ಷೆಗೆ ಸಜ್ಜು
ದಾವಣಗೆರೆಯಲ್ಲಿ 20,927 ವಿದ್ಯಾರ್ಥಿಗಳು SSLC ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ. ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಪರೀಕ್ಷಾ ಮಂಡಳಿ ಸಜ್ಜಾಗಿದೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ.
ಹೊನ್ನಾಳಿ(ಜೂ.01): ದಾವಣಗೆರೆ ಜಿಲ್ಲೆಯಲ್ಲಿ 20927 ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾ ಉಪನಿದೇರ್ಶಕ ಪರಮೇಶ್ವರಪ್ಪ ತಿಳಿಸಿದರು. ಪಟ್ಟಣದ ಹಳದಮ್ಮ ದೇವಿ ಬಾಲಕಿಯರ ಪ್ರೌಢಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ಜಿಲ್ಲೆಯಲ್ಲಿ ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಗ್ಗೆ ವಿಡಿಯೋ ಕಾನ್ಪರೆನ್ಸ್ ನಡೆಸಲಾಗಿದೆ ಜೂನ್ 25 ರಿಂದ ಜುಲೈ 4 ರವರೆಗೆ ನಡೆಯುವ ಪರೀಕ್ಷೆಗೆ 79 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಹೆಚ್ಚುವರಿಯಾಗಿ 14 ಬ್ಲಾಕ್ ಗಳನ್ನು ಸ್ಥಾಪಿಸಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗಳಿಗೆ ಎರಡು ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡುವ ವ್ಯವಸ್ಥೆ ಮಾಡಲಾಗಿದೆ. ಒಂದು ಮಾಸ್ಕ್ ಶಿಕ್ಷಣ ಇಲಾಖೆ ನೀಡಿದರೆ ಮತ್ತೊಂದನ್ನು ಜಿಲ್ಲಾ ಸ್ಕೌಟ್ ಅಂಡ್ ಗೈಡ್ಸ್ ವತಿಯಿಂದ ನೀಡಲಾಗುವುದು ಎಂದು ಹೇಳಿದರು.
ಶಿವಮೊಗ್ಗದಲ್ಲಿ ಕೊರೋನಾ ವಾರಿಯರ್ಸ್‌ಗೂ ವಕ್ಕರಿಸಿದ ಕೋವಿಡ್ 19 ಹೆಮ್ಮಾರಿ..!
ಪರೀಕ್ಷಾ ಕೊಠಡಿಯಲ್ಲಿ ಕೇವಲ 16 ರಿಂದ 20 ವಿದ್ಯಾರ್ಥಿಗಳಿಗೆ ಅವಕಾಶ ನೀಡಿದೆ. ಪ್ರತಿ ವಿದ್ಯಾರ್ಥಿಯಿಂದ ಒಂದು ಮೀಟರ್ ಅಂತರ ಕಾಯ್ದಕೊಳ್ಳಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಸಿಬ್ಬಂದಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಿಬ್ಬಂದಿ ಒಂದು ಗಂಟೆ ಮುಂಚಿತವಾಗಿ ಬರಲಿದ್ದು ಈಗಾಗಲೇ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಪರೀಕ್ಷೆ ಬರುವ ವಿದ್ಯಾರ್ಥಿಗಳಿಗೆ ಉಚಿತ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿವರಿಸಿದರು. ಇದೇ ಸಂದರ್ಭದಲ್ಲಿ ಎಸ್.ಎಸ್.ಮೊಂಜಿಲ್ ಉಚಿತ ಮನೆಪಾಠ ಸಂಸ್ಥಾಪಕ ಷಹಜಾಹಾನ್ ಅವರು ಹೊನ್ನಾಳಿ ತಾಲೂಕಿನ 2900 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಉಚಿತ ಮಾಸ್ಕ್ ನೀಡುವುದಾಗಿ ಉಪ ನಿರ್ದೇಶಕರಿಗೆ ತಿಳಿಸಿದರು.