ಬೆಂಗಳೂರು: ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ, ಯುವಕ ಸಾವು
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಯಶವಂತಪುರ ಸಂಚಾರ ಪೋಲಿಸರು. ಅಪಘಾತ ಎಸಗಿದ್ದ ಬಿಎಂಟಿಸಿ ಬಸ್ ಚಾಲಕನಿಗೆ ಠಾಣೆಗೆ ಬರುವಂತೆ ಸೂಚನೆ ನೀಡಿದ ಪೊಲೀಸರು.

ಬೆಂಗಳೂರು(ಅ.14): ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿಯಾದ ಘಟನೆ ಇಂದು(ಶನಿವಾರ) ಯಶವಂತಪುರದಲ್ಲಿ ನಡೆದಿದೆ. ಗಂಗಾಧರ್ (21) ಎಂಬಾತನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ.
ಮೃತ ಗಂಗಾಧರ್ ಹೆಚ್‌ಎಎಲ್‌ಗೆ ಇಂಟರ್ನಿಶಿಫ್ ಸರ್ಟಿಫಿಕೇಟ್ ತರಲು ತೆರಳುತ್ತಿದ್ದ ಎಂದು ತಿಳಿದು ಬಂದಿದೆ. ಯಶವಂತಪುರ ಗಾರೆಪ್ಪನ ಪಾಳ್ಯ ರಸ್ತೆಯ ಹೂವಿನ ಮಾರ್ಕೆಟ್ ಸಮೀಪ ಅಪಘಾತ ಸಂಭವಿಸಿದೆ. ಬಿಎಂಟಿಸಿ ಬಸ್ ಹಿಂಭಾಗದಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ವೇಳೆ ಬಸ್‌ನ ಚಕ್ರ ಗಂಗಾಧರ್ ಮೇಲೆ ಹರಿದು ಸಾವನ್ನಪ್ಪಿದ್ದಾನೆ.
ಹೊಸಪೇಟೆ ಬಳಿ ಭೀಕರ ಅಪಘಾತ: 7 ಜನರ ದುರ್ಮರಣ, ದೇವಸ್ಥಾನಕ್ಕೆ ಹೋದವರು ಮರಳಿ ಬರಲೇ ಇಲ್ಲ..!
ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಯಶವಂತಪುರ ಸಂಚಾರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಎಸಗಿದ್ದ ಬಿಎಂಟಿಸಿ ಬಸ್ ಚಾಲಕನಿಗೆ ಠಾಣೆಗೆ ಬರುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.