ಶಿವಮೊಗ್ಗ: ದ್ವಿಚಕ್ರ ವಾಹನ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ ವ್ಯಾಪ್ತಿಯ ಪ್ರಗತಿ ಶಾಲೆ ಬಳಿ ನಡೆದ ಘಟನೆ 

23 Year Old Man Dies due to Bike Accident in Shivamogga grg

ಶಿವಮೊಗ್ಗ(ಸೆ.13):  ದ್ವಿಚಕ್ರ ವಾಹನ ಅಪಘಾತವಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಸಾಗರ ನಗರಸಭೆ ವ್ಯಾಪ್ತಿಯ ಪ್ರಗತಿ ಶಾಲೆ ಬಳಿ ಸೋಮವಾರ ತಡ ರಾತ್ರಿ ನಡೆದಿದೆ. 

ಖಂಡಿಕಾ ಗ್ರಾಪಂ ಕುಗ್ವೆ ಬ್ರಾಹ್ಮಣಕೇರಿಯ ರಂಜಿತಾ (23) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವು 

ಬೆಳಗಾವಿ: ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ತಾಲೂಕಿನ ಸಿದ್ದನಹಳ್ಳಿ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ. ತಾಲೂಕಿನಸಿದ್ಧನಹಳ್ಳಿ ಗ್ರಾಮದ ರಾಕೇಶ್ ಸುಲಧಾಳ(26) ಮೃತ ದುರ್ದೈವಿಯಾಗಿದ್ದಾನೆ. 

ಸರ್ಕಾರದ ವೈಫಲ್ಯಕ್ಕೆ ಮತ್ತೊಂದು ಬಲಿ: ಚರಂಡಿಗೆ ಬಿದ್ದು ಸಾವನ್ನಪ್ಪಿದ ಯುವತಿ!

ಕೆಲಸಕ್ಕೆಂದು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಬೇರುಸಮೇತ ಮರ ಬಿದ್ದಿದೆ. ತಲೆ ಮೇಲೆಯೇ ಮರ ಬಿದ್ದಿದ್ದರಿಂದ ರಾಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೋರ್ವನಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.  ಘಟನಾ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವುಗೊಳಿಸಿದ್ದಾರೆ. 

ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ ಮೇಲೆ ಮಾರಾಣಾಂತಿಕ ಹಲ್ಲೆ

ದುಷ್ಕರ್ಮಿಗಳ ತಂಡವೊಂದು ರೌಡಿಶೀಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಗರದ ಮಲ್ಲೇಶ್ವರಂ ಮಂತ್ರಿಮಾಲ್ ಎದುರುಗಡೆ ಇಂದು(ಮಂಗಳವಾರ) ನಡೆದಿದೆ. 

ರೌಡಿಶೀಟರ್ ಗಣೇಶ್ ಮೇಲೆ ದುಷ್ಕರ್ಮಿಗಳು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಆಕ್ಟಿವಾದಲ್ಲಿ ಬೈಕ್‌ನಲ್ಲಿ ಬರುತ್ತಿದ್ದ ಗಣೇಶ್ ಈ ವೇಳೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ ಅಂತ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. 
 

Latest Videos
Follow Us:
Download App:
  • android
  • ios