ಶಿವಮೊಗ್ಗ[ಸೆ.10]  ಸೆಲ್ಫಿ ವೀಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೊರಬ ತಾಲೂಕಿನ ಕೊಡಕಣಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕೊಡಕಣಿ ಗ್ರಾಮದ ಡ್ಯಾನ್ಸ್ ಮಾಸ್ಟರ್ ಕೀರ್ತಿ ಯುವರಾಜ್ (23) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಪಟ್ಟಣದ ಬಸ್ ನಿಲ್ದಾಣದ ಸಮೀಪದಲ್ಲಿನ ನಿವೇಶನದ ವಿವಾದಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದ್ದು, ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗ: ಅನೈತಿಕ ಸಂಬಂಧ? ಲಾಡ್ಜ್‌ನಲ್ಲಿ ಮಕ್ಕಳನ್ನು ಮಲಗಿಸಿ ಮಹಿಳೆ ಕೊಲೆ ಮಾಡಿ ಆತ್ಮಹತ್ಯೆ

ಘಟನೆ ಹಿನ್ನೆಲೆ: ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಸಮೀಪದ ಪೆಟ್ರೊಲ್ ಬಂಕ್ ಪಕ್ಕದ ನಿವೇಶನಕ್ಕೆ ಸಂಬಂಧಿಸಿದಂತೆ ಬಂಕ್ ಮಾಲೀಕರು ಹಾಗೂ ಆತ್ಮಹತ್ಯೆಗೆ ಯತ್ನಿಸಿದ ಯುವಕ ತಂದೆಯ ನಡುವೆ ವಿವಾದವಿತ್ತು. ಈ ಕುರಿತು ನ್ಯಾಯಾಲಯದಲ್ಲಿ ಪ್ರಕರಣವೂ ದಾಖಲಾಗಿತ್ತು. ಈ ಕುರಿತು ಬಂಕ್ ಮಾಲೀಕರು ತನ್ನ ತಂದೆಗೆ ಮಾನಸಿಕವಾಗಿ ಕಿರುಕುಳ ನೀಡಿರುವುದಲ್ಲದೇ, ವಿವಿಧ ರೀತಿಯಲ್ಲಿ ತೇಜೋವಧೆಗೆ ಮುಂದಾಗಿದ್ದರು. ತನ್ನ ಪೋಷಕರಿಗೆ ಅವಾಚ್ಯವಾಗಿ ನಿಂದಿಸಿದ್ದರು. ಜೊತೆಗೆ ಪೊಲೀಸ್ ಠಾಣೆಯಲ್ಲಿ ಸುಳ್ಳು ಪ್ರಕರಣವನ್ನು ಸಹ ದಾಖಲಿಸಿದ್ದರು ಎಂದು ಯುವಕ ಆರೋಪಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ದಾಖಲಾಗದ ದೂರು: ಕಳೆದ ಮೂರ್‍ನಾಲ್ಕು ದಿನದ ಹಿಂದೆ ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಈವರೆಗೂ ಯಾವುದೇ ದೂರು ದಾಖಲಾಗಿಲ್ಲ. 

"