Asianet Suvarna News Asianet Suvarna News

Chikkaballapur: ಎತ್ತಿನಹೊಳೆ ಯೋಜನೆಗೆ 23 ಸಾವಿರ ಕೋಟಿ: ಸಚಿವ ಸುಧಾಕರ್‌

ಈ ಭಾಗದಲ್ಲಿನ ನೀರಿನ ಭವಣೆಯನ್ನು ನೀಗಿಸಲು ಪ್ರಗತಿಯಲ್ಲಿರುವ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳಿಗೆ 23 ಸಾವಿರ ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ಸದ್ಯದಲ್ಲೇ ಸಚಿವ ಸಂಪುಟ ಸಭೆ ಕರೆದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ಕೈಗೊಳ್ಳಲಿದ್ದಾರೆಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. 

23000 crores for Ettinahole project says minister dr k sudhakar at chikkaballapur gvd
Author
First Published Nov 27, 2022, 8:59 PM IST

ಚಿಕ್ಕಬಳ್ಳಾಪುರ (ನ.27): ಈ ಭಾಗದಲ್ಲಿನ ನೀರಿನ ಭವಣೆಯನ್ನು ನೀಗಿಸಲು ಪ್ರಗತಿಯಲ್ಲಿರುವ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳಿಗೆ 23 ಸಾವಿರ ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ಸದ್ಯದಲ್ಲೇ ಸಚಿವ ಸಂಪುಟ ಸಭೆ ಕರೆದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ಕೈಗೊಳ್ಳಲಿದ್ದಾರೆಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ಮಂಚೇನಹಳ್ಳಿಯ ಜರಬಂಡಹಳ್ಳಿ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತಣಾಡಿದ ಅವರು,ಕಂದಾಯ ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಇದ್ದಂತಹ ತೊಡಕುಗಳನ್ನು ನಿವಾರಿಸುವಲ್ಲಿ ಕಂದಾಯ ಸಚಿವರು ದಿಟ್ಟಕ್ರಮಗಳನ್ನು ಕೈಗೊಂಡಿದ್ದಾರೆಂದರು.

ರಾಜ್ಯದಲ್ಲೇ ದಾಖಲೆ: ಚಿಕ್ಕಬಳ್ಳಾಪುರ ವಿಧಾನ ಸಭಾ ವ್ಯಾಪ್ತಿಯಲ್ಲಿ 22 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನಗಳನ್ನು ಸದ್ಯದಲ್ಲೆ ವಿತರಿಸಲು ಸ್ಥಳದಲ್ಲಿಯೇ ಮಂಜೂರಾತಿ ನೀಡಿರುವುದಾಗಿ ಕಂದಾಯ ಸಚಿವರು ಘೋಷಿಸಿದ್ದಾರೆ ಅದರಂತೆ ಕ್ಷೇತ್ರದ ಕಡುಬಡವರಿಗೆ ಆದ್ಯತೆಯ ಮೇಲೆ ವಿತರಿಸಲಾಗುವುದು. ಅದಕ್ಕೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಈ ರೀತಿಯ ನಿವೇಶನ ಹಂಚಿಕೆಯು ರಾಜ್ಯದ ಯಾವ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಗಿರಲಿಕ್ಕಿಲ್ಲ ಇದೊಂದು ದಾಖಲೆಯಾಗಲಿದೆ. 216 ಮಂದಿ ಪೌತಿ ಖಾತೆ ಪಹಣಿ ವಿತರಿಸಲಾಗುತ್ತಿದೆ. 7.85 ಕೋಟಿ ರು, ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಸಚಿವ ಸುಧಾಕರ್‌ ವಿತರಿಸಿದರು.

ಮಂಚೇನಹಳ್ಳಿಯಲ್ಲಿ ಮಿನಿ ವಿಧಾನಸೌಧ ನಿರ್ಮಾಣ: ಸಚಿವ ಅಶೋಕ್‌ ಘೋಷಣೆ

ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜ್‌ ಮಾತನಾಡಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗ್ರಾಮೀಣ ಜನರಿಗೆ ನೇರವಾಗಿದೆ.ಕಂದಾಯ ಇಲಾಖೆಯ ಸೇವೆಗಳನ್ನು ಜನರಿಗೆ ತಲುಪಿಸಲು ಕಾನೂನು ಸರಳೀಕರಣ ಮಾಡಿದೆ ಈ ನಿಟ್ಟಿನಲ್ಲಿ ಮತ್ತಷ್ಟು ಸರಳೀಕರಣದ ಅಗತ್ಯತೆ ಇದೆ ಎಂದು ಕಂದಾಯ ಸಚಿವರಲ್ಲಿ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳು, ಮಂಜೂರಾತಿ ಪತ್ರಗಳು, ಕಾರ್ಯಾದೇಶ ಪಾತ್ರಗಳನ್ನು ಸಚಿವರುಗಳು ವಿತರಣೆ ಮಾಡಿದರು. ವೇದಿಕೆ ಕಾರ್ಯಕ್ರಮದ ನಂತರ ಸ್ಥಳೀಯ ಸಾರ್ವಜನಿಕರಿಂದ 230 ಅಹವಾಲುಗಳನ್ನು ಸ್ವೀಕರಿಸಿದರು.

ಸಚಿವರಿಗೆ ಗಜಗಾತ್ರದ ಹಾರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೂ ಮುನ್ನ ಮಂಚೇನಹಳ್ಳಿ ತಾಲ್ಲೂಕಿನ ನುಲಗುಮ್ಮನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ಕಂದಾಯ ಸಚಿವರಾದ ಆರ್‌.ಅಶೋಕ, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ನಾಗರಾಜ್‌ (ಎಂಟಿಬಿ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್‌ ರವರಿಗೆ 150 ಕೆಜಿಗೂ ಹೆಚ್ಚು ತೂಕದ ಕನಕಾಂಬರದ ಬೃಹತ್‌ ಹೂವಿನ ಹಾರ ಹಾಕುವ ಮೂಲಕ ಭವ್ಯ ಸ್ವಾಗತ ನೀಡಿದರು.ಗ್ರಾಮದ ಮಹಿಳೆಯರು ಪೂರ್ಣಕುಂಭದೊಂದಿಗೆ ಸಚಿವರನ್ನು ಬರಮಾಡಿಕೊಂಡರು. ನಂತರ ನುಲಗುಮ್ಮನಹಳ್ಳಿ ಗ್ರಾಮದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ಗ್ರಾಮ ವಾಸ್ತವ್ಯದ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ನನ್ನನ್ನು ಸೋಲಿಸಿಬಿಟ್ಟರು: ಕಣ್ಣೀರಿಟ್ಟ ಸಚಿವ ಎಂಟಿಬಿ ನಾಗರಾಜ್‌

ಬಿಎಸ್‌ವೈ, ಅಶೋಕ್‌ಗೆ ಕೃತಜ್ಞತೆ ಸಲ್ಲಿಕೆ: ಮಂಚೇನಹಳ್ಳಿ ತಾಲೂಕನ್ನು ಘೋಷಣೆ ಮಾಡಿದ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಕಂದಾಯ ಸಚಿವ ಆರ್‌.ಅಶೋಕ್‌ರನ್ನು ಸಚಿವ ಡಾ.ಕೆ.ಸುಧಾಕರ್‌ ವೇದಿಕೆಯಲ್ಲಿ ಸ್ಮರಿಸಿದರು. ಅಲ್ಲದೇ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಒಂದು ವಿನೂತನ ಪ್ರಯತ್ನ. ಬಡವರಿಗೆ, ರೈತರಿಗೆ ಇದರಿಂದ ಹೆಚ್ಚು ಅನುಕೂಲವಾಗಲಿದೆಯೆಂದು ಡಾ.ಕೆ.ಸುಧಾಕರ್‌ ತಿಳಿಸಿದರು.

Follow Us:
Download App:
  • android
  • ios