ಲಾಕ್‌ಡೌನ್ ಉಲ್ಲಂಘನೆ: 24 ಗ್ರಾಪಂ ಸದಸ್ಯರು ಸಾಮೂಹಿಕ ರಾಜೀನಾಮೆ
ಕಾರವಾರ ತಾಲೂಕಿನ ಕೈಗಾ ಅಣು ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಕೋವಿಡ್ -19 ಲಾಕ್‌ಡೌನ್ ನಿಯಮ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಮಲ್ಲಾಪುರ ಗ್ರಾಪಂನ 24 ಜನಪ್ರತಿನಿಧಿಗಳು ಶನಿವಾರ ತಮ್ಮ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.
ಉತ್ತರ ಕನ್ನಡ(ಮೇ.03): ಕಾರವಾರ ತಾಲೂಕಿನ ಕೈಗಾ ಅಣು ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಕೋವಿಡ್ -19 ಲಾಕ್‌ಡೌನ್ ನಿಯಮ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಮಲ್ಲಾಪುರ ಗ್ರಾಪಂನ 24 ಜನಪ್ರತಿನಿಧಿಗಳು ಶನಿವಾರ ತಮ್ಮ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.
ಅಣು ಶಕ್ತಿ ಕೇಂದ್ರಕ್ಕೆ ಹೊರ ರಾಜ್ಯದಿಂದ 8ರಿಂದ 10 ಕಾರ್ಮಿಕರು ಬಂದಿದ್ದು, ಇವರನ್ನು ಕ್ವಾರಂಟೈನ್ ಮಾಡದೇ ನೇರವಾಗಿ ಕೆಲಸಕ್ಕೆ ತೆಗೆದುಕೊಂಡಿರುವುದರಿಂದ ಬೇಸರಗೊಂಡು ಸದಸ್ಯತ್ವಕ್ಕೆ ರಾಜೀನಾಮೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸುಧಾಕರ್ ಬಣ ತೊರೆದು ಜೆಡಿಎಸ್ ಸೇರಿದ ಬಿಜೆಪಿ ಮುಖಂಡ
ಸ್ಥಳೀಯರು ಕೂಡ ಅಲ್ಲಿಗೆ ಕೆಲಸಕ್ಕೆ ಹೋಗುತ್ತಿದ್ದು, ಹೊರ ರಾಜ್ಯದ ಕಾರ್ಮಿಕರಲ್ಲಿ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡರೂ ಎಲ್ಲರಿಗೂ ತೊಂದರೆ ಆಗುತ್ತದೆ. ಎಲ್ಲ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಟಾಸ್ಕ್‌ಪೋರ್ಸ್ ಸಮೀತಿ ಬೇಡಿಕೆ ಇಟ್ಟಿದ್ದರೂ ಆಡಳಿತ ಮಂಡಳಿ ಸ್ಪಂದಿಸಿಲ್ಲ. ಇದರಿಂದ ಬೇಸರಗೊಂಡು ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇವೆ ಎಂದಿದ್ದಾರೆ. ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ತಮ್ಮ ಪತ್ರ ನೀಡಿದ್ದಾ