ಬೆಳ್ತಂಗಡಿ (ಫೆ.07):ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀರಾಮ ಮಂದಿರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಲಕ್ಷ ರು. ನಿಧಿ ಸಮರ್ಪಣೆ ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಹಸ್ತಾಂತರಿಸಿದರು. 

ವಿಶ್ವ ಹಿಂದೂ ಪರಿಷತ್‌ನ ಪದಾಧಿಕಾರಿಗಳು ಧರ್ಮಸ್ಥಳದಲ್ಲಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಸಮಾಲೋಚಿಸಿದರು. 

ಧರ್ಮಸ್ಥಳ ಕ್ಷೇತ್ರದಿಂದ ಶ್ರೀರಾಮ ಮಂದಿರಕ್ಕೆ 25 ಲಕ್ಷ ನಿಧಿ: ವೀರೇಂದ್ರ ಹೆಗ್ಗಡೆ .

ಈ ಸಂದರ್ಭದಲ್ಲಿ ಹೆಗ್ಗಡೆಯವರು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರದಿಂದ ಘೋಷಿಸಿದ್ದ 25 ಲಕ್ಷ ರು. ನಿಧಿ ಸಮರ್ಪಣೆಯ ಡಿಡಿಯನ್ನು ವಿಶ್ವ ಹಿಂದು ಪರಿಷತ್‌ ರಾಷ್ಟ್ರೀಯ ಕಾರ್ಯದರ್ಶಿ ರಾಘವನ್‌ ಅವರಿಗೆ ಹಸ್ತಾಂತರಿಸಿದರು. 

ಈ ಸಂದರ್ಭ ವಿಶ್ವ ಹಿಂದೂ ಪರಿಷತ್‌ ದಕ್ಷಿಣ ಪ್ರಾಂತ ಅಧ್ಯಕ್ಷ ಎಂ.ಬಿ. ಪುರಾಣಿಕ್‌, ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ ಇದ್ದರು.