ವಿಜಯಪುರ(ಮಾ.13): ಜಿಲ್ಲೆಯ ಸಿಂದಗಿ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನ ಬಂಧಿಸಿದ ಘಟನೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಇಂದು(ಶುಕ್ರವಾರ) ನಡೆದಿದೆ. ಈ ವೇಳೆ 25 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ. 

ಎರಡು ಪ್ರತ್ಯೇಕ ಗಾಂಜಾ ಪ್ರಕರಣಗಳಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರಲ್ಲಿ ಇಬ್ಬರನ್ನ ಬಂಧಿಸಲಾಗಿದೆ.  ಈ ವೇಳೆ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ದತ್ತಾತ್ರೇಯ ಯಾತನೂರ್ ಹಾಗೂ ಹಣಮಂತರಾಯ್ ಬಂಧಿತ ಆರೋಪಿಗಳಾಗಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದತ್ತಾತ್ರೇಯ ಯಾತನೂರ್ ಹಾಗೂ ರಾಜೇಂದ್ರ ವಾಲಿಕಾರ್ ತೋಟದ ಮನೆ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ 107 ಕೆಜಿ ಒಣಗಿದ ಗಾಂಜಾ, 13 ಗಾಂಜಾ ಹಸಿ ಗಿಡಗಳನ್ನ ಜಪ್ತಿ ಮಾಡಲಾಗಿದೆ. 

ರಾಜೇಂದ್ರ ವಾಲಿಕಾರ್ ಸ್ಥಳದಿಂದ ಪರಾರಿಯಾಗಿದ್ದು, ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಅಬಕಾರಿ ಪೊಲೀಸ್ ಎ.ಎ. ಮುಜಾವರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಈ ಸಂಬಂಧ ಸಿಂದಗಿ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.